ರಾಜಭವನದಲ್ಲಿ ನೂತನ ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ಸತತ 12 ದಿನಗಳ ಕಾಲ ನಡೆದ ಚಿಂತನ ಮಂಥನ​ ಬಳಿಕ ಜೆಡಿಎಸ್​-ಕಾಂಗ್ರೆಸ್​ ನೇತೃತ್ವದ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಆಗಿದೆ. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ನೂತನ ಸಚಿವರಿಗೆ ಗವರ್ನರ್ ವಿ.ಆರ್​.ವಾಲಾ ಪ್ರತಿಜ್ಞಾವಿಧಿ ಬೋಧಿಸಿದರು.

ಕಾಂಗ್ರೆಸ್‌ ಶಾಸಕರುಗಳಾದ ಆರ್‌.ವಿ.ದೇಶಪಾಂಡೆ, ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್‌, ಕೃಷ್ಣಬೈರೇಗೌಡ, ರಮೇಶ್ ಜಾರಕಿಹೊಳಿ, ಪ್ರಿಯಾಂಕ ಖರ್ಗೆ, ಶಿವಶಂಕರ್ ರೆಡ್ಡಿ, ಯು.ಟಿ.ಖಾದರ್, ಜಮೀರ್ ಅಹಮದ್ ಖಾನ್, ಶಿವಾನಂದ್ ಪಾಟೀಲ್, ವೆಂಕಟರಮಣಪ್ಪ, ರಾಜಶೇಖರ್‌ ಪಾಟೀಲ್‌, ಸಿ.ಪುಟ್ಟರಂಗಶೆಟ್ಟಿ, ಡಾ.ಜಯಮಾಲಾ ಹಾಗೂ ಕಾಂಗ್ರೆಸ್​ಗೆ ಬೆಂಬಲ ನೀಡಿದ್ದ ರಾಣಿಬೆನ್ನೂರು ಕ್ಷೇತ್ರದ ಪಕ್ಷೇತರ ಶಾಸಕ ಆರ್​.ಶಂಕರ್  ಸಂಪುಟ ದರ್ಜೆ ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಜೆಡಿಎಸ್‌ನ ಶಾಸಕರುಗಳಾದ ಹೆಚ್.ಡಿ.ರೇವಣ್ಣ, ಬಂಡೆಪ್ಪ ಕಾಶಂಪೂರ್‌, ಜಿ.ಟಿ.ದೇವೇಗೌಡ, ಡಿ.ಸಿ.ತಮ್ಮಣ್ಣ, ಎಂ.ಸಿ.ಮನಗೂಳಿ, ವೆಂಕಟ್ ರಾವ್ ನಾಡಗೌಡ, ಸಿ.ಎಸ್​.ಪುಟ್ಟರಾಜು, ಸಾ.ರಾ.ಮಹೇಶ್, ಎಸ್​.ಆರ್​.ಶ್ರೀನಿವಾಸ್, ಬಿಎಸ್​ಪಿಯ ಎನ್​.ಮಹೇಶ್, ಸಂಪುಟ ದರ್ಜೆ ಸಚಿವರಾಗಿ ಪ್ರತಿಜ್ಞಾವಿಧಿ ಸ್ವೀಕರಿಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv