ಕಟ್ಟಡ ಕುಸಿತ; ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಆರ್.ವಿ. ದೇಶಪಾಂಡೆ

ಧಾರವಾಡ: ಸಚಿವ ಆರ್.ವಿ. ದೇಶಪಾಂಡೆ ಇಂದು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಕಟ್ಟಡ ಕುಸಿತದಿಂದ ಗಾಯಗೊಂಡವರ ಆರೋಗ್ಯ ವಿಚಾರಿಸಿದ್ರು. ಈ ವೇಳೆ ಮಾತನಾಡಿದ ಅವರು, ಕಟ್ಟಡ ಕುಸಿದು ಬಹಳ ಜನರಿಗೆ ಅಪಾಯವಾಗಿದ್ದು ದುರ್ದೈವದ ಸಂಗತಿಯಾಗಿದೆ. ನನಗೆ ಬಂದ ಮಾಹಿತಿ ಪ್ರಕಾರ ಈ ಬಿಲ್ಡಿಂಗ್ ಕುಸಿದು ಮೂರು ಜನ ಸಾವನ್ನಪ್ಪಿದ್ದಾರೆ, 54 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ, ಒಬ್ಬರು ಐಸಿಯುನಲ್ಲಿದ್ದಾರೆ. ನಿನ್ನೆಯಿಂದ ನಮ್ಮ ಅಧಿಕಾರಿಗಳು ಸ್ಥಳದಲ್ಲಿದ್ದು ರಕ್ಷಣಾ ಕಾರ್ಯದಲ್ಲಿ ಭಾಗಿಯಾಗಿದ್ದಾರೆ. 2 ಎನ್​​ಡಿಆರ್​​ಎಫ್ ತಂಡ ಈಗಾಗಲೇ ರಕ್ಷಣಾ ಕಾರ್ಯದಲ್ಲಿ ತೊಡಗಿದೆ ಎಂದು ಹೇಳಿದರು.

ನಿನ್ನೆ ಸ್ವಯಂ ಪ್ರೇರಿತವಾಗಿ ರಕ್ಷಣಾ ಕಾರ್ಯದಲ್ಲಿ ತೊಡಗಿದವರಿಗೆ ಅಭಿನಂದನೆಗಳು. ಹುಬ್ಬಳ್ಳಿ ಧಾರವಾಡದಲ್ಲಿ ಇತಂಹ ಅಕ್ರಮ ಕಟ್ಟಡ ಕಟ್ಟಲು ಮುಂದಾದವರ ಮೇಲೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದರು. ಸಚಿವ ಆರ್.ವಿ. ದೇಶಪಾಂಡೆ ಜೊತೆಗೆ ಸಚಿವ. ಸಿ.ಎಸ್​​. ಶಿವಳ್ಳಿ ಕೊಡ ಆಸ್ಪತ್ರೆಗೆ ಭೇಟಿ ನೀಡಿದ್ರು.


Follow us on:

YouTube: firstNewsKannada  Instagram: firstnews.tv  Face Book: firstnews.tv  Twitter: firstnews.tv