ಗಾಂಧಿ ಜಯಂತಿ ಅಂಗವಾಗಿ ಸಚಿವ ದೇಶಪಾಂಡೆ ಮಜಾಳಿ ಬೀಚ್​ನಲ್ಲಿ ಶ್ರಮ ದಾನ

ಕಾರವಾರ: ಮಹಾತ್ಮ ಗಾಂಧಿ ಜಯಂತಿ ಪ್ರಯುಕ್ತವಾಗಿ ಮಜಾಳಿ ಬೀಚ್​ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಸ್ವಚ್ಛತಾ ಶ್ರಮ ದಾನ ಮಾಡಿದರು. ಜಿಲ್ಲೆಯ ಕಾರವಾರ ತಾಲೂಕಿನ ಮಜಾಳಿ ಗ್ರಾಮದಲ್ಲಿ ನಡೆದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ದರು. ಕಾರ್ಯಕ್ರಮದಲ್ಲಿ ನಗರದ ವಿವಿಧ ಶಾಲಾ ಕಾಲೇಜು ವಿದ್ಯಾರ್ಥಿಗಳು, ಜಿಲ್ಲಾಡಳಿತ ಅಧಿಕಾರಿಗಳು ಮತ್ತು ಸ್ಥಳೀಯರು ಸೇರಿ ಒಟ್ಟು 1000ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು.

ಸ್ವಚ್ಛತಾ ಶ್ರಮ ದಾನ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ದೇಶಪಾಂಡೆ, ಮಹಾತ್ಮ ಗಾಂಧಿ ಜಯಂತಿ ಅರ್ಥಪೂರ್ಣವಾಗಬೇಕು ಅಂದ್ರೆ ಸ್ವಚ್ಛತೆ ಕಾಪಾಡಿಕೊಳ್ಳಬೇಕು. ಇವತ್ತು ಒಂದು ದಿನ ಮಾತ್ರ ಸ್ವಚ್ಛತೆ ಮಾಡಿದರೆ ಸಾಕಾಗಲ್ಲ. ನಿರಂತರವಾಗಿ ಜನರು ಸ್ವಯಂ ಸ್ವಚ್ಛತೆ ಕಾಪಾಡಿಕೊಳ್ಳಬೇಕು ಹೇಳಿದರು. ಇದಕ್ಕೂ ಮೊದಲು ನಗರದಲ್ಲಿನ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.

ಸ್ವಚ್ಚತಾ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್, ಜಿಲ್ಲಾ ಪಂಚಾಯತಿ ಸಿಇಓ ರೋಷನ್ ಸಾತ್ ನೀಡಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv