ರಮೇಶ ಜಾರಕಿಹೊಳಿ ನೇತೃತ್ವದಲ್ಲಿ ಸಮ್ಮಿಶ್ರ ಸರ್ಕಾರಕ್ಕೆ ಕಂಟಕ: ಸಹೋದರನ ಎಚ್ಚರಿಕೆ

ಬೆಳಗಾವಿ: ರಮೇಶ್ ಜಾರಕಿಹೊಳಿ ಬಹಿರಂಗವಾಗಿ ಬಿಜೆಪಿ ಸೇರ್ಪಡೆಯಾದ್ರೆ ಪರಿಸ್ಥಿತಿಯೇ ಬೇರೆ ಅಂತಾ ಸಹೋದರ ಸತೀಶ್​ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ರಮೇಶ್ ಇನ್ನೂ ಕತ್ತಲಲ್ಲಿ ಕುಳಿತು ಕಲ್ಲು ಎಸೆಯುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಅನ್ಯಾಯವಾಗಿದೆ ಅಂತಾ ಕಾರ್ಯಕರ್ತರಿಗೆ ಹೇಳಿದ್ದಾರೆ. ಇನ್ನು ರಮೇಶ ಜಾರಕಿಹೊಳಿಯಿಂದ ಸಮ್ಮಿಶ್ರ ಸರ್ಕಾರಕ್ಕೆ ಕಂಟಕವಿದೆ. ಅದು ನಿರಂತರವಾಗಿ ಇದ್ದೇ ಇರುತ್ತೆ ಎಂದರು.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv