ಪಾಕಿಸ್ತಾನಕ್ಕೆ ಹೋಗಿ ಚಹಾ ಕುಡಿದು ಬರುವ ಅಗತ್ಯವಿತ್ತಾ? -ಸಚಿವ ಖಾದರ್ ಪ್ರಶ್ನೆ

ಬೆಂಗಳೂರು: ಜವಾಬ್ದಾರಿ ಸ್ಥಾನದಲ್ಲಿ ಇರುವವರು ಪಾಕಿಸ್ತಾನಕ್ಕೆ ಹೋಗಿ ಚಹಾ ಕುಡಿದು ಬರುವ ಅಗತ್ಯವಿತ್ತಾ? ವಿರೋಧಿಗಳ ಜೊತೆ ಸ್ನೇಹ ಬಯಸಬೇಕಿತ್ತಾ? ಅಂತಾ ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಪ್ರಶ್ನಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು, ವಿರೋಧಿಗಳು ಎಂಬುದು ಗೊತ್ತಿದ್ದರೂ ಅಲ್ಲಿಗೆ ಹೋಗಿದ್ದು ಸರಿಯಲ್ಲ. ಅಲ್ಲಿಂದ ಇಲ್ಲಿಗೆ ಬಂದು ಸೀರೆ ಕೊಡುವುದೂ ಬೇಕಿರಲಿಲ್ಲ. ಹಾಗಂತ ನಾವೀಗ ರಾಜಕೀಯ ಮಾಡಲು ಹೋಗುವುದಿಲ್ಲ. ದೇಶದ ಅಖಂಡತೆಯ ವಿಚಾದಲ್ಲಿ ಯಾರೂ ರಾಜಕೀಯ ಮಾಡಬಾರದು. ಕೇಂದ್ರ ಸರ್ಕಾರಕ್ಕೆ ನಮ್ಮ ಸಂಪೂರ್ಣ ಬೆಂಬಲ ಇದೆ. ಉಗ್ರರ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಬೇಕಿದೆ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv