ವಿಧಾನಪರಿಷತ್​ ಚುನಾವಣೆ ಬಳಿಕ ಸಂಪುಟ ವಿಸ್ತರಣೆ : ಡಿಸಿಎಂ ಡಾ.ಜಿ ಪರಮೇಶ್ವರ್

ಕಾರವಾರ: ವಿಧಾನ ಪರಿಷತ್​ ಚುನಾವಣೆ ಬಳಿಕ ಸಂಪುಟ ವಿಸ್ತರಣೆ ಹಾಗೂ ಸಚಿವರ ಖಾತೆ ಬದಲಾವಣೆಯನ್ನು ಆದಷ್ಟು ಬೇಗ ಮುಗಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.
ಕಾರವಾರ ತಾಲೂಕಿನ ಹಣಕೊಣದಲ್ಲಿನ ಸಾತೇರಿ ದೇವಿಯ ದೇವಸ್ಥಾನಕ್ಕೆ ಭೇಟಿ ನೀಡುವುದಕ್ಕೂ ಮುನ್ನ ಗೋವಾ ಏರ್​ಪೋರ್ಟ್​ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ನಮ್ಮ ಶಾಸಕರನ್ನು ಬೇರೆ ಪಕ್ಷದವರು ಹಣದ ಆಮಿಷ ಒಡ್ಡಿ ಸೆಳೆಯಲು ಯತ್ನಿಸಿದ ಸಂದರ್ಭದಲ್ಲಿ ಸ್ವಾಭಾವಿಕವಾಗಿ ಹಾಗೆ ದಂಗೆ ಅನ್ನೋ ಪ್ರತಿಕ್ರಿಯೆಯನ್ನು ಮುಖ್ಯಮಂತ್ರಿಗಳು ಹೇಳಿದ್ದಾರೆ. ಅದನ್ನು ಯಥಾವತ್ತಾಗಿ ಅರ್ಥಮಾಡಿಕೊಳ್ಳುವ ಅವಶ್ಯಕತೆಯಿಲ್ಲ ಎಂದು ಅವರು ಹೇಳಿದರು. ಇನ್ನು ಸಾತೇರಿ ದೇವಿಯ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ದೇವಿಗೆ ಸಂಬಂಧಿಸಿದ ವಸ್ತುಗಳ ಹರಾಜಿನಲ್ಲಿ 15401 ರೂ ಕೊಟ್ಟು ದೇವಿಯ ಮೂಗುತಿಯನ್ನ ಪಡೆದುಕೊಂಡರು.

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv