ಬಿಜೆಪಿ ಕಾರ್ಯಕರ್ತರಿದ್ದ ಬಸ್​ಗೆ ಕಲ್ಲು ತೂರಾಟ: 7 ಆರೋಪಿಗಳ‌ ಬಂಧನ

ಮಂಗಳೂರು: ಬಿಜೆಪಿ ಕಾರ್ಯಕರ್ತರಿದ್ದ ಬಸ್​ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, 7 ಆರೋಪಿಗಳ‌ನ್ನ ಇಂದು ಬಂಧಿಸಲಾಗಿದೆ. ನಿನ್ನೆ  ಮಂಗಳೂರಿನ ನೆಹರೂ ಮೈದಾನದಲ್ಲಿ ನಡೆದ ಮೋದಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ವಾಪಸ್ ತೆರಳುತ್ತಿದ್ದ ವೇಳೆ ಬಿಜೆಪಿ ಕಾರ್ಯಕರ್ತರಿದ್ದ ಬಸ್ ಉಳ್ಳಾಲದ ಮದನಿನಗರದಲ್ಲಿ ಬೈಕ್​ವೊಂದಕ್ಕೆ ಡಿಕ್ಕಿ ಹೊಡೆದಿತ್ತು. ಅಪಘಾತದ ಬಳಿಕ ಸ್ಥಳೀಯರು ಬಸ್ಸಿನ ಮೇಲೆ ಕಲ್ಲು ತೂರಾಟ ನಡೆಸಿದ್ದು, ಬಸ್ಸಿನಲ್ಲಿದ್ದ ಕೆಲವು ಕಾರ್ಯಕರ್ತರಿಗೆ ಗಾಯಗಳಾಗಿತ್ತು. ಈ ವೇಳೆ ಸ್ಥಳದಲ್ಲಿ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು, ಕಲ್ಲು ತೂರಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ರು. ಈ ಹಿನ್ನೆಲೆ ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯ ಪೊಲೀಸರನ್ನು ಕಳಿಸಲಾಗಿದ್ದು, ಸದ್ಯ 7 ಆರೋಪಿಗಳ‌ನ್ನ ಪೊಲೀಸರು ಬಂಧಿಸಿದ್ದಾರೆ. ಘಟನೆ ಸಂಬಂಧ ಕೋಣಾಜೆ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.


firstNewsKannada  Instagram: firstnews.tv  Facebook: firstnews.tv  Twitter: firstnews.tv