ಕಾಣೆಯಾಗಿದ್ದ ರಮೇಶ್​ ಗೌಡ ಶವವಾಗಿ ಪತ್ತೆ

ದಕ್ಷಿಣ ಕನ್ನಡ: ಕೆಲ ದಿನಗಳ ಹಿಂದೆ ಕಾಣೆಯಾಗಿದ್ದ ಬೆಳ್ತಂಗಡಿ ತಾಲೂಕು ಬಾರ್ಯ ಗ್ರಾಮದ ಅಜಿಲ ನಿವಾಸಿ ರಮೇಶ್​ ಗೌಡ (45) ನಿನ್ನೆ ಸಂಜೆ ಶವವಾಗಿ ಪತ್ತೆಯಾಗಿದ್ದಾರೆ. ಅವರ ಮೃತದೇಹ ಬಂಟ್ವಾಳ ತಾಲೂಕಿನ ಶಂಬೂರು ಡ್ಯಾಂನಲ್ಲಿ ಪತ್ತೆಯಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಬಂಟ್ವಾಳ ಪೊಲೀಸರು ಮೃತ ದೇಹವನ್ನ ಹೊರ ತೆಗೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇನ್ನು, ಕಾಣೆಯಾಗಿದ್ದ ರಮೇಶ್​ ಗೌಡನನ್ನ ಬಿಜೆಪಿ ಕಾರ್ಯಕರ್ತ ಎಂದು ಬಿಂಬಿಸಲಾಗಿತ್ತು. ಆದ್ರೆ, ಮೃತರ ಸಂಬಂಧಿ ಶಶಿಧರ್​ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ರಮೇಶ್​ ಗೌಡ ಬಿಜೆಪಿ ಕಾರ್ಯಕರ್ತನಲ್ಲ ಎಂದಿದ್ದಾರೆ.