‘ಸಿಎಂ ಕುಮಾರಸ್ವಾಮಿ ಟಿಪ್ಪು ಜಯಂತಿಯಲ್ಲಿ ಭಾಗಿಯಾಗದೆ ಕಾಣೆ!’

ದಾವಣಗೆರೆ: ಸಿಎಂ ಕುಮಾರಸ್ವಾಮಿ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗದೆ ಕಾಣೆಯಾಗಿದ್ದಾರೆ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಸಿಎಂ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಟಿಪ್ಪು ಜಯಂತಿಯಲ್ಲಿ ಭಾಗವಹಿಸಿದ್ರೆ ಗೊಂದಲ ಸೃಷ್ಟಿಯಾಗತ್ತೆ ಅಂತಾ ಗೈರಾಗಿದ್ದಾರೆ. ಅನಾರೋಗ್ಯದ ನೆಪವೊಡ್ಡಿ ಸಿಎಂ ಕುಮಾರಸ್ವಾಮಿ ಕಾಣೆಯಾಗಿದ್ದಾರೆ. ನಾಳೆ ಕುರ್ಚಿ ಅಲ್ಲಾಡುತ್ತೆ ಅಂದರೆ ಎದ್ದು ಬರ್ತಾರೆ ಎಂದು ಹೇಳಿದರು.

ನಿಮ್ಮ ಸಲಹೆ ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂರ್ಪಕಿಸಿ:contact@firstnews.tv