ಪ್ರಶ್ನೆ ಮಾಡಿದ್ದಕ್ಕೆ ವ್ಯಕ್ತಿ ಮೇಲೆ ಶಾಸಕ ಜೆ.ಸಿ.ಮಾಧುಸ್ವಾಮಿ‌ ಹಲ್ಲೆ ಆರೋಪ

ತುಮಕೂರು: ವ್ಯಕ್ತಿಯೊಬ್ಬರು ಪ್ರಶ್ನೆ ಮಾಡಿದ್ದಕ್ಕೆ ಶಾಸಕ ಜೆ.ಸಿ.ಮಾಧುಸ್ವಾಮಿ‌ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಚಂದ್ರು  ಹಲ್ಲೆಗೊಳಗಾದ ವ್ಯಕ್ತಿ. ಆತನನ್ನ ಸದ್ಯ ತುಮಕೂರು‌ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ನಿನ್ನೆ ತಡರಾತ್ರಿ ಚಿಕ್ಕನಾಯಕನಹಳ್ಳಿ ತಾಲೂಕಿನ ತಮ್ಮಡಿಹಳ್ಳಿ ಗೊಲ್ಲರಹಟ್ಟಿಯಲ್ಲಿ  ಬಿಜೆಪಿ ಪರ ಶಾಸಕ ಜೆ.ಸಿ.ಮಾಧುಸ್ವಾಮಿ‌ ಪ್ರಚಾರ ನಡೆಸುತ್ತಿದ್ದರು. ಈ ವೇಳೆ ನಮ್ಮ ಗ್ರಾಮಕ್ಕೆ ಮೂಲಭೂತ ಸೌಲಭ್ಯ ಕಲ್ಪಿಸದ ನಿಮಗೆ ಮತಯಾಚಿಸಲು ನೈತಿಕತೆ ಇಲ್ಲ ಅಂತಾ ಚಂದ್ರು  ಹೇಳಿದ್ದಾನೆ. ಈ ವೇಳೆ ಆಕ್ರೋಶಗೊಂಡ ಮಾಧುಸ್ವಾಮಿ ಮೈಕ್‌ನಿಂದ ಚಂದ್ರು ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆಯಲ್ಲಿ ಚಂದ್ರು ಬಾಯಿ ತುಟಿಗೆ ಗಾಯವಾಗಿದೆ. ಹುಳಿಯಾರು ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv