‘ಸಮ್ಮಿಶ್ರ ಸರ್ಕಾರ ತಾಜ್​ ಹೋಟೆಲ್​ನಲ್ಲಿ ಆಡಳಿತ ಮಾಡುತ್ತಿದೆ’

ದಾವಣಗೆರೆ: ಸಮ್ಮಿಶ್ರ ಸರ್ಕಾರದ ಆಡಳಿತ ವೈಫಲ್ಯದಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಸಿಎಂ ಕುಮಾರಸ್ವಾಮಿ, ಮುಖ್ಯಮಂತ್ರಿ ಆದ 24 ಗಂಟೆ ಒಳಗೆ ಸಾಲ ಮನ್ನಾ ಮಾಡುತ್ತೇವೆ ಎಂದಿದ್ದರು. ಈಗ ಮಾತಿಗೆ ತಪ್ಪಿದ್ದಾರೆ ಎಂದು ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದರು.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸಾಲ ಮನ್ನಾ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ, ಬ್ಯಾಂಕ್​ಗಳಿಗೆ ಎಚ್ಚರಿಕೆ ನೀಡುತ್ತಿದ್ದಾರೆ. ಸಿಎಂ ಬ್ಯಾಂಕಿಗೆ ಎಚ್ಚರಿಕೆ ನೀಡುವುದಲ್ಲ. ಬದಲಾಗಿ ಸಾಲ ಮನ್ನಾ ಮಾಡಿ ನಾವು ನಿಮ್ಮೊಂದಿಗೆ ಇದ್ದೇವೆ ಎಂದು ಆತ್ಮಸ್ಥೈರ್ಯ ತುಂಬಬೇಕಿದೆ ಎಂದರು.

ಇನ್ನು, ಸಮ್ಮಿಶ್ರ ಸರ್ಕಾರದ ಶಾಸಕರು, ಸಚಿವರು ವಿಧಾನಸೌಧದಲ್ಲಿ ಸಿಗುವುದಿಲ್ಲ. ವಿಧಾನಸೌಧದ ಕೊಠಡಿಗಳಿಗೆ ಬೀಗ ಹಾಕಿ, ತಾಜ್​ ವೆಸ್ಟ್ ​ಎಂಡ್​ ಹೋಟೆಲ್​ನಲ್ಲಿ ಸರ್ಕಾರ ಆಡಳಿತ ನಡೆಸುತ್ತಿದೆ. ತಾಜ್​ ವೆಸ್ಟ್​ ಎಂಡ್​ ಹೋಟೆಲ್​ಗೆ ಮುಖ್ಯಮಂತ್ರಿ ವರ್ಷಕ್ಕೆ ಮೂರು ಕೋಟಿ ಹಣ ಬಾಡಿಗೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು. ಇದರಿಂದಾಗಿ ಜನಪ್ರತಿನಿಧಿಗಳನ್ನು ಹುಡುಕಿಕೊಡಿ ಎಂದು ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಮ್ಮಿಶ್ರ ಸರ್ಕಾರದ ವಿರುದ್ಧ ರೇಣುಕಾಚಾರ್ಯ ಕಿಡಿಕಾರಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv