ನೀತಿ ಸಂಹಿತೆ ಉಲ್ಲಂಘನೆ ಆರೋಪ, ಶಾಸಕ ರವೀಂದ್ರ ಪೊಲೀಸ್ ವಶಕ್ಕೆ

ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪ ಹಿನ್ನೆಲೆಯಲ್ಲಿ ಮಾಜಿ ಸಚಿವ, ದಾವಣಗೆರೆ ಶಾಸಕ ರವೀಂದ್ರನಾಥರನ್ನ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನೀತಿ ಸಂಹಿತೆ ಉಲ್ಲಂಘನೆ ಆರೋಪ ಸಂಬಂಧ ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನಲ್ಲಿ ವಿಚಾರಣೆ ನಡೆಯಿತು. ವಿಚಾರಣೆ ಬಳಿಕ ಕೋರ್ಟ್​ ಶಾಸಕ ರವೀಂದ್ರನಾಥ್ ಸೇರಿ ಐವರನ್ನ ಪೊಲೀಸ್ ವಶಕ್ಕೆ ಒಪ್ಪಿಸಿದೆ.  ನಂತರ 250ರೂಪಾಯಿ ದಂಡ  ವಿಧಿಸಿ, ವಾರಂಟ್ ರೀಕಾಲ್ ಮಾಡಿ‌ ಜಾಮೀನು ಮಂಜೂರು ಮಾಡಿತು.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv