‘ಕ್ಷೇತ್ರದಲ್ಲಿ ಕಾರ್ಯಕ್ರಮವಿತ್ತು, ಅಧಿವೇಶನದಲ್ಲಿ ಪಾಲ್ಗೊಳ್ಳಲು ಆಗಿಲ್ಲ’

ದಾವಣಗೆರೆ: ಕ್ಷೇತ್ರದಲ್ಲಿ ಹಲವಾರು ಕಾರ್ಯಕ್ರಮಗಳಿತ್ತು. ಆದ ಕಾರಣ ಅಧಿವೇಶನದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಲಿಲ್ಲ ಎಂದು ಹರಿಹರ ಕಾಂಗ್ರೆಸ್ ಶಾಸಕ ಎಸ್.ರಾಮಪ್ಪ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು. ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರಿಂದ ಪರ್ಮಿಷನ್ ಪಡೆದುಕೊಂಡು ಬಂದಿದ್ದೆ. ಮೊದಲ ದಿನದ ಅಧಿವೇಶನ ಇರುವುದರಿಂದ ಕಾರ್ಯಕ್ರಮ ಮುಗಿದ ಮೇಲೆ ಹೋದರಾಯಿತು ಎಂದುಕೊಂಡೆ. ಸಂಜೆ 5 ಗಂಟೆಯೊಳಗೆ ಬೆಂಗಳೂರಿಗೆ ಹೋಗುತ್ತೇನೆ. ನಾವು ಯಾವುದೇ ಕಾರಣಕ್ಕೂ ಪಕ್ಷ ಬಿಟ್ಟು ಹೋಗುವುದಿಲ್ಲ. ನಮ್ಮ ನಾಯಕರು ಸಿದ್ದರಾಮಯ್ಯ ,ಕುಮಾರಸ್ವಾಮಿ ಅವರು. ಸಿಎಂ ಕುಮಾರಸ್ವಾಮಿ ಅವರ ಆಡಳಿತ ತೃಪ್ತಿ ತಂದಿದೆ ಎಂದು ಶಾಸಕ ರಾಮಪ್ಪ ಅಭಿಪ್ರಾಯಪಟ್ಟರು.


Follow us on:

YouTube: firstNewsKannada  Instagram: firstnews_tv  Face Book: firstnews.tv  Twitter: firstnews_tv

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv