‘ಕಾಂಗ್ರೆಸ್ ಎಲ್ಲಾ ಕೊಟ್ಟಿದೆ, ನಾನು ಯಾವುದೇ ಕಾರಣಕ್ಕೂ ಬಿಜೆಪಿ ಸೇರಲ್ಲ’

ದಾವಣಗೆರೆ: ಯಾವನೋ ಬಿಜೆಪಿ ಹುಚ್ಚ ಹೇಳ್ತಾನೆ ಅಂತ ನಾನು ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋಗಲ್ಲ. ನನಗೂ ದುಡ್ಡು ಕೊಡ್ತೀನಿ, ಮಿನಿಸ್ಟ್ರು ಮಾಡ್ತೀನಿ ಅಂದಿದ್ರು, ನಾನು ಯಾವುದೇ ಆಮಿಷ ಒಡ್ಡಿದರೂ ಕಾಂಗ್ರೆಸ್ ಬಿಟ್ಟು ಹೋಗಲ್ಲ ಎಂದು ಕಾಂಗ್ರೆಸ್ ಶಾಸಕ ಎಸ್. ರಾಮಪ್ಪ ಬಿಜೆಪಿ ಸೇರುವ ವಿಚಾರ ಕುರಿತು ಸ್ಪಷ್ಟನೆ ನೀಡಿದ್ದಾರೆ.

ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಎಸ್. ರಾಮಪ್ಪ, ಕಾಂಗ್ರೆಸ್ ನನಗೆ ಎಲ್ಲಾ ಕೊಟ್ಟಿದೆ. ಸಮ್ಮಿಶ್ರ ಸರ್ಕಾರ ಸಿಎಂ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಉತ್ತಮ ಕೆಲಸ ಮಾಡುತ್ತಿದೆ. ರೈತರ ಸಾಲಮನ್ನ ಸೇರಿದಂತೆ ಅಭಿವೃದ್ಧಿ ಕೆಲಸ ಮಾಡುತ್ತಿದೆ. ಎಲ್ಲ ಶಾಸಕರಿಗೂ ಸಿಎಂ ಸ್ಪಂದಿಸುತ್ತಿದ್ದಾರೆ. ನಾನು ಯಾವುದೇ ಕಾರಣಕ್ಕೂ ಬಿಜೆಪಿ ಸೇರಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv