ಸತೀಶ್​ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವಂತೆ ಧಾರಾಕಾರ ಮಳೆಯಲ್ಲಿ ಪ್ರತಿಭಟನೆ

ದಾವಣಗೆರೆ: ಯಮಕನಮರಡಿ ಕಾಂಗ್ರೆಸ್​ ಶಾಸಕ, ಹಿರಿಯ ಮುಖಂಡ ಸತೀಶ್​ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ ಮಾನವ ಬಂಧುತ್ವ ವೇದಿಕೆ ಮತ್ತು ವಾಲ್ಮೀಕಿ ನಾಯಕ ಸಮಾಜದಿಂದ ನಗರದ ಜಯದೇವ ಸರ್ಕಲ್​ನಲ್ಲಿ ಪ್ರತಿಭಟನೆ ನಡೆಸಿದೆ.

ಪ್ರತಿಭಟನೆಯಲ್ಲಿ ಮೈತ್ರಿ ಸರ್ಕಾರ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಸತೀಶ್​ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಬೇಕೆಂದು ಕಾಂಗ್ರೆಸ್​ ಹೈಕಮಾಂಡ್​ಗೆ ಒತ್ತಾಯಿಸಿದರು. ಇನ್ನು ಧಾರಾಕಾರ ಸುರಿದ ಮಳೆಗೂ ಪ್ರತಿಭಟನೆಕಾರರು ಸ್ಥಳದಿಂದ ಕದಲಲಿಲ್ಲ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv