‘ನನ್ನ ಹೆಸರಲ್ಲಿ ಸಕ್ಕರೆ ಕಾರ್ಖಾನೆಯಿಲ್ಲ.. ನನ್ನ ಮಕ್ಕಳ ಹೆಸರಿನಲ್ಲಿದೆ’

ದಾವಣಗೆರೆ: ರೈತರ ಕಬ್ಬಿನ ಬಾಕಿ ಹಣ ಪಾವತಿ ಬಗ್ಗೆ ಕಾಂಗ್ರೆಸ್​ನ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನದು ಯಾವುದೇ ಸಕ್ಕರೆ ಫ್ಯಾಕ್ಟರಿಗಳಿಲ್ಲ. ಎಲ್ಲವೂ ನನ್ನ ಮೂರು ಮಕ್ಕಳ ಹೆಸರಿನಲ್ಲಿವೆ. ಆದರೆ, ಅವರು ಯಾವುದೇ ಬಾಕಿ ಉಳಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ, ಈಗಾಗಲೇ ಸಿಎಂ ಕುಮಾರಸ್ವಾಮಿ ರೈತರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿದ್ದು, ರೈತರಿಗೆ ಬಾಕಿ ಹಣ ಪಾವತಿಯಾಗಬೇಕಿದೆ. ರೈತರ ಸಮಸ್ಯೆಯನ್ನು ಸಿಎಂ ಕುಮಾರಸ್ವಾಮಿ ಬಗೆಹರಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ಸಮ್ಮಿಶ್ರ ಸರ್ಕಾರದಿಂದ ಕೆಲವು ಪ್ರಮುಖರ ಪೋನ್ ಕದ್ದಾಲಿಕೆ ಆರೋಪದ ಬಗ್ಗೆಯೂ ಪ್ರತಿಕ್ರಿಯೆ ನೀಡಿದ ಅವರು, ಯಾವಾಗಲೂ ಪೋನ್ ಕದ್ದಾಲಿಕೆ ನಡೆಯುತ್ತದೆ. ಆದರೆ, ಕೆಲವೊಮ್ಮೆ ಮಾತ್ರ ಅದು ಹೊರಗೆ ಬರುತ್ತದೆ ಎಂದು ಹೇಳಿದರು. ಇನ್ನು ಶಿವಶಂಕರಪ್ಪ ಅವರ ಪೋನ್​​ನ್ನು ತೆರಿಗೆ ಇಲಾಖೆ ಅಧಿಕಾರಿಗಳು ಕದ್ದಾಲಿಕೆ ಮಾಡುತ್ತಾರೆ ಎಂದು ಹೇಳಿದರು.

ಇನ್ನು, ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಇದು ನಮ್ಮ ಹೈ ಕಮಾಂಡ್ ನಿರ್ಧಾರ ಮಾಡಲಿದ್ದಾರೆ. ಮುಂದಿನ ಲೋಕಸಭೆ ಚುನಾವಣೆಗೆ ದಾವಣಗೆರೆಯಿಂದ ಯಾರನ್ನು ಅಭ್ಯರ್ಥಿ ಮಾಡಬೇಕು ಎನ್ನುವ ಬಗ್ಗೆಯೂ ನಮ್ಮ ಹೈ ಕಮಾಂಡ್ ನಿರ್ಧಾರ ಮಾಡಲಿದ್ದಾರೆ. ಆದರೆ, ಇಲ್ಲಿ ಬಲಿಷ್ಠ ಅಭ್ಯರ್ಥಿಯನ್ನೇ ನಿಲ್ಲಿಸುತ್ತೇವೆ ಎಂದು ಹೇಳಿದರು.

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv