ಶಾಮನೂರುಗೆ ಸಚಿವ ಸ್ಥಾನ ಸಿಗದಿದ್ದಕ್ಕೆ ಜಿಲ್ಲಾ ಕಾಂಗ್ರೆಸ್​ ಆಕ್ರೋಶ

ದಾವಣಗೆರೆ: ಶಾಮನೂರು ಶಿವಶಂಕರಪ್ಪಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆ ವೀರಶೈವ ಲಿಂಗಾಯತ ಮುಖಂಡರಿಗೆ ಅನ್ಯಾಯ ಆಗಿದೆ ಎಂದು ಕಾಂಗ್ರೆಸ್​ ಕಾರ್ಯಕರ್ತರು ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದಾರೆ. ದಾವಣಗೆರೆ ಮಹಾನಗರ ಪಾಲಿಕೆಯ 39 ಕಾಂಗ್ರೆಸ್​ ಕಾರ್ಪೊರೇಟರ್​ಗಳು, ಕಾಂಗ್ರೆಸ್​ ಜಿಲ್ಲಾಧ್ಯಕ್ಷ, ಜಿಲ್ಲೆಯ ಎಲ್ಲಾ ಬ್ಲಾಕ್​ ಕಾಂಗ್ರೆಸ್​ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ.
ಮಹಾನಗರ ಪಾಲಿಕೆಯ ಮೇಯರ್​ಗೆ ಪಾಲಿಕೆಯ ವಾರ್ಡ್​ ನಂಬರ್​ 26ರ ಸದಸ್ಯ ಶಿವಗಂಗೆ ಬಸವರಾಜ ರಾಜೀನಾಮೆ ನೀಡಿದ್ದಾರೆ. ಸಂಜೆಯೊಳಗೆ ಶಾಮನೂರು ಶಿವಶಂಕರಪ್ಪರಿಗೆ ಪಕ್ಷದ ವರಿಷ್ಠರು ಸಚಿವ ಸ್ಥಾನ ನೀಡಬೇಕು. ಇಲ್ಲದಿದ್ದರೆ ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಮಾಡಲು ಯಾವ ಕಾರ್ಯಕರ್ತರು ಇರುವುದಿಲ್ಲ. ಅವರೇ ಬಂದು ಪಕ್ಷ ಸಂಘಟನೆ ಮಾಡಿಕೊಳ್ಳಲಿ ಎಂದು ಎಚ್ಚರಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv