ಶಿವರಾಮ ಹೆಬ್ಬಾರ್‌ ಸಚಿವ ಸ್ಥಾನಕ್ಕಾಗಿ ಪ್ರಯತ್ನಿಸಲಿ- ಸಚಿವ ಆರ್‌.ವಿ.ದೇಶಪಾಂಡೆ

ಕಾರವಾರ: ಯಲ್ಲಾಪುರ ಕ್ಷೇತ್ರದ ಕಾಂಗ್ರೆಸ್​ ಶಾಸಕ ಶಿವರಾಮ ಹೆಬ್ಬಾರ ಅವರು ಸಚಿವರಾಗುವುದಾದರೆ ಆಗಲಿ. ಅವರು ಇನ್ನು ಯಂಗ್ ಇದ್ದಾರೆ. ಅಲ್ಲದೇ ಕ್ಷೇತ್ರದಲ್ಲಿ ಚೈತನ್ಯದಿಂದ ಕೆಲಸ ಮಾಡುತ್ತಿದ್ದಾರೆ. ನಾನು ಯಾವಾಗಲೂ ಮಂತ್ರಿ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಆರ್​.ವಿ. ದೇಶಪಾಂಡೆ ಹೇಳಿದ್ದಾರೆ.

ಇಂದು ಕಾರವಾರದಲ್ಲಿ ಮಾಧ್ಯಮಕ್ಕೆ ಶಿವರಾಮ ಹೆಬ್ಬಾರರಿಗೆ ಸಚಿವ ಸ್ಥಾನದ ಕುರಿತು ಪ್ರತಿಕ್ರಿಯಿಸಿದ ಅವರು, ನಾನು ಇದುವರೆಗೆ ಯಾರಿಗೂ ಸಚಿವರನಾಗಿ ಮಾಡಿ ಎಂದು ಹೇಳಿಲ್ಲ. ಯಾವುದನ್ನು ಕೂಡ ಗಟ್ಟಿ ಹಿಡಿದುಕೊಂಡಿಲ್ಲ. ಆದರೆ ಶಿವರಾಮ ಹೆಬ್ಬಾರ ಸಚಿವ ಸ್ಥಾನಕ್ಕಾಗಿ ಪ್ರಯತ್ನ ನಡೆಸಲಿ ಎಂದು ಸಲಹೆ ನೀಡಿದರು.

ಇನ್ನು, ಸಮ್ಮಿಶ್ರ ಸರ್ಕಾರದ ಕುರಿತು ಮಾತನಾಡಿದ ಅವರು, ಶಾಸಕರುಗಳು ಪಕ್ಷಾಂತರ ಮಾಡುತ್ತಿದ್ದಾರೆ ಎನ್ನುವುದು ಮಾಧ್ಯಮಗಳಲ್ಲಿ ಸೃಷ್ಟಿಸಲಾಗುತ್ತಿದೆ. ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ. ಸ್ವತಃ ರಮೇಶ ಜಾರಕಿಹೊಳಿ ಕೂಡ ಈ ಸರ್ಕಾರ 5 ವರ್ಷ ಸುಭದ್ರವಾಗಿ ನಡೆಯಲಿದೆ. ಈ ವಿಷಯಕ್ಕೆ ಅನಾವಶ್ಯಕವಾಗಿ ಹೆಚ್ಚಿನ ಮಹತ್ವ ಕೊಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ ಎಂದರು. ಇನ್ನು ಶಾಸಕರು ಮುಂಬೈ ಅಥವಾ ಇನ್ನಿತರ ಭಾಗಗಳಿಗೆ ತೆರಳುವುದು ಸಾಮಾನ್ಯ. ಆದರೆ ಅದಕ್ಕೆ ಇನ್ನಿತರ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಎಂದರು.

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv