ಟಿಕೆಟ್ ಸಿಕ್ರೆ ಬಳ್ಳಾರಿ ಮಗಳಾಗಿ ಕೆಲಸ ಮಾಡ್ತೇನೆ: ಜೆ.ಶಾಂತಾ

ಬಳ್ಳಾರಿ: ನನಗೆ ಟಿಕೆಟ್ ಸಿಕ್ಕರೆ ಬಳ್ಳಾರಿಯ ಮಗಳಾಗಿ ಕೆಲಸ ಮಾಡ್ತೇನೆ. ಆದ್ರೆ, ಯಾರಿಗೆ ಟಿಕೆಟ್ ಕೊಟ್ಟರೂ ನಮ್ಮ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುತ್ತೇನೆ ಎಂದು ಶ್ರೀರಾಮುಲು ಸಹೋದರಿ, ಮಾಜಿ ಸಂಸದೆ ಜೆ ಶಾಂತಾ ಹೇಳಿದ್ದಾರೆ.

ಬಳ್ಳಾರಿಯಲ್ಲಿ ನಡೆಯುತ್ತಿರುವ ಮಗಳ ಮದುವೆ ಸಮಾರಂಭದ ವೇಳೆ ಮಾತನಾಡಿದ ಅವರು, ಪಕ್ಷದ ವರಿಷ್ಠರ ಹೇಳಿಕೆಗೆ ನಾನು ಬದ್ಧಳಾಗಿದ್ದೇನೆ.  ನಾವು ಸೈನಿಕರಿದ್ದಂತೆ. ಪಕ್ಷ ಸೂಚಿಸಿದಂತೆ ನಡೆಯುತ್ತೇವೆ. ಸೈನಿಕರಂತೆಯೇ ಚುನಾವಣೆಗೆ ಸಿದ್ಧರಾಗುತ್ತೇವೆ. ಯಾರೇ ಅಭ್ಯರ್ಥಿಯಾದ್ರು, ಸೈನಿಕರಂತೆ ಹೋರಾಟ ಮಾಡ್ತೇವೆ ಎಂದು ಹೇಳಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv