ನಾನು ಮುಖ್ಯಮಂತ್ರಿ ಆಗುವವನು, DCM ಅಲ್ಲ: ಶಾಸಕ ಉಮೇಶ್ ಕತ್ತಿ

ಬೆಳಗಾವಿ: ನಾನು ಮುಖ್ಯಮಂತ್ರಿ ಆಗುವವನು, ಉಪ ಮುಖ್ಯಮಂತ್ರಿ ಅಲ್ಲ ಎಂದು ಹುಕ್ಕೇರಿಯ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ. ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಉಮೇಶ್ ಕತ್ತಿ, ಕೇಂದ್ರದಲ್ಲಿ ಬಿಜೆಪಿ ಹೊಸ ಸರ್ಕಾರ ರಚನೆ ಆಗುತ್ತಿದ್ದಂತೆ ರಾಜ್ಯದಲ್ಲೂ ಹೊಸ ಸರ್ಕಾರ ರಚನೆ ಆಗುತ್ತೆ. ಲೋಕಸಭಾ ಚುನಾವಣಾ ಫಲಿತಾಂಶ ಬಳಿಕ ಯಡಿಯೂರಪ್ಪ ಮುಖ್ಯಮಂತ್ರಿ ಆಗುತ್ತಾರೆ ಎಂದು ಉಮೇಶ ಕತ್ತಿ ಹೇಳಿದ್ರು.
ಇನ್ನು ಶಾಸಕ ರಮೇಶ ಜಾರಕಿಹೊಳಿ ರಾಜೀನಾಮೆ ನೀಡೋದು ಅವರ ವೈಯಕ್ತಿಕ ವಿಚಾರ. ಅವರ ಮನೆತನ ವಿಷಯದ ಬಗ್ಗೆ ನಾನು ಮಾತನಾಡುವುದಿಲ್ಲ. ಅವರು ಪಕ್ಷಕ್ಕೆ ಬಂದರೆ ಸ್ವಾಗತ ಮಾಡುತ್ತೇವೆ ಎಂದು ಇದೇ ವೇಳೆ ಶಾಸಕ ಉಮೇಶ ಕತ್ತಿ ತಿಳಿಸಿದ್ರು.
ಸದ್ಯ ಉತ್ತರ ಕರ್ನಾಟಕ ಅಭಿವೃದ್ಧಿ ಆಗುತ್ತಿಲ್ಲ, ಯಾಕಂದ್ರೆ 90 % ಬಜೆಟ್ ದಕ್ಷಿಣ ಕರ್ನಾಟಕಕ್ಕೆ ಹೋಗುತ್ತಿದ್ದೆ, 10 % ಮಾತ್ರ ಉತ್ತರ ಕರ್ನಾಟಕಕ್ಕೆ ಸಿಗುತ್ತೆ.  ಹೀಗಾಗಿ ಉತ್ತರ ಕರ್ನಾಟಕ ಅಭಿವೃದ್ಧಿ ಆಗಬೇಕು ಎಂಬುವುದು ನಮ್ಮ ಇಚ್ಛೆ. ಯಾವುದೇ ಪಕ್ಷದಲ್ಲಿ ಇದ್ದರೂ ಉತ್ತರ ಕರ್ನಾಟಕ ಅಭಿವೃದ್ಧಿಯಾಗಬೇಕು ಎಂಬುದು ನನ್ನ ಉದ್ದೇಶ. ಪ್ರತ್ಯೇಕ ರಾಜ್ಯ ವಿಚಾರದ ಬಗ್ಗೆ ಚರ್ಚೆ ಮಾಡಿ  ಮುಂದೆ ಹೇಳುತ್ತೇನೆ ಎಂದು ಅವರು ಹೇಳಿದರು.

 


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv