ಬಿ.ಕೆ.ಸಂಗಮೇಶ್ವರ್​ಗೆ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಪ್ರೊಟೆಸ್ಟ್

ಶಿವಮೊಗ್ಗ : ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ವರ್​ಗೆ ಸಚಿವ ಸ್ಥಾನ ಕೈತಪ್ಪಿದ ಹಿನ್ನೆಲೆಯಲ್ಲಿ ಯೂತ್ ಕಾಂಗ್ರೆಸ್ ಹಾಗೂ ಎನ್ಎಸ್​ಯುಐ ಕಾರ್ಯಕರ್ತರು ನಗರದ ಶಿವಪ್ಪನಾಯಕನ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿದರು. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಉಳಿವಿಗಾಗಿ ಸಂಗಮೇಶ್ವರ್​ಗೆ ಸಚಿವ ಸ್ಥಾನ ನೀಡಬೇಕು. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರೂ ಸಚಿವ ಸ್ಥಾನ ನೀಡಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದರು. ಇದೇ ವೇಳೆ ನೂರಾರು ಕಾರ್ಯಕರ್ತರು ಜಮಾಯಿಸಿ ಶಾಸಕ ಸಂಗಮೇಶ್ವರ್​​ಗೆ ಸಚಿವ ಸ್ಥಾನ ಕೊಡಲೇ ಬೇಕೆಂದು ಆಗ್ರಹಿಸಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv