ಭಗವಾನ್​ ಬುದ್ಧರ 256ನೇ ಜಯಂತಿ: 20 ಜೋಡಿಗಳಿಗೆ ಸಾಮೂಹಿಕ ಮದುವೆ

ಕೋಲಾರ: ಭಗವಾನ್​ ಬುದ್ಧರ 256ನೇ ಜಯಂತಿ ಅಂಗವಾಗಿ ಭೀಮಸೇನಾ ಕರ್ನಾಟಕ ಸಂಘಟನೆಯಿಂದ ಕೋಲಾರದಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಲಾಗಿತ್ತು. 20 ಜೋಡಿಗಳು ನವ ಜೀವನಕ್ಕೆ ಕಾಲಿರಿಸಿದರು.

ಸಾಮೂಹಿಕ ಮದುವೆ ಕಾರ್ಯಕ್ರಮದಲ್ಲಿ, ಸ್ಪೀಕರ್​ ರಮೇಶ್​ ಕುಮಾರ್, ಕೋಲಾರ ಶಾಸಕ ಕೆ. ಶ್ರೀನಿವಾಸಗೌಡ ಸೇರಿದಂತೆ ಹಲವು ಮುಖಂಡರು ಪಾಲ್ಗೊಂಡಿದ್ದರು. ಭಗವಾನ್​ ಬುದ್ಧರ ಜಯಂತಿಯ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವೂ 20 ನವ ಜೋಡಿಗಳಿಗೆ ಸಾಮೂಹಿಕ ವಿವಾಹ ಮಾಡಲಾಯಿತು. ಇದೇ ವೇಳೆ ಮಾತನಾಡಿದ ಸ್ಪೀಕರ್​ ರಮೇಶ್​ ಕುಮಾರ್,​ ಎಲ್ಲರೂ ಆಡಂಬರದ ಮದುವೆಗಳನ್ನು ಬಿಟ್ಟು ಸರಳ ವಿವಾಹ ಮಾಡಿಕೊಳ್ಳಲು ಮುಂದಾಗಬೇಕು ಎಂದು ಕರೆ ನೀಡಿದ್ರು.
ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv