ಹೆಚ್​.ಡಿ.ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಪ್ರಧಾನಿ ಮೋದಿ

ನವದೆಹಲಿ: ಮಾಜಿ ಪ್ರಧಾನಿ ಹೆಚ್​.ಡಿ.ದೇವೇಗೌಡರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 87ನೇ ವರ್ಷದ ಸಂಭ್ರಮದಲ್ಲಿರುವ ಜೆಡಿಎಸ್​ ವರಿಷ್ಠ ಹೆಚ್​ಡಿ ದೇವೇಗೌಡರಿಗೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದಾರೆ. ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡರಿಗೆ ಹುಟ್ಟುಹಬ್ಬದ ಶುಭಾಶಗಳು, ನಾನು ಅವರ ದೀರ್ಘ ಮತ್ತು ಆರೋಗ್ಯಕರ ಜೀವನಕ್ಕಾಗಿ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಟ್ವೀಟ್​ ಮಾಡಿದ್ದಾರೆ.