ಆತ್ಮಹತ್ಯೆಗೆ ಯತ್ನಿಸಿದ ತಾಯಿ, ಮಗಳ ದುರ್ಮರಣ

ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ಕೊಳ್ಳೆಗಾಲ ತಾಲೂಕಿನ ಬಸ್ತೀಪುರ ಬಡಾವಣೆಯಲ್ಲಿ ತಾಯಿಯೊಬ್ಬಳು ತನ್ನಿಬ್ಬರು ಮಕ್ಕಳಿಗೆ ವಿಷವುಣಿಸಿ ತಾನೂ ಸಹ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಘಟನೆಯಲ್ಲಿ 7 ವರ್ಷದ ಬಾಲಕಿಯೊಬ್ಬಳು ಸ್ಥಳದಲ್ಲೆ ಮೃತಪಟ್ಟಿದ್ದಾಳೆ. ಇನ್ನಿಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಮೈಸೂರಿನ ಆಸ್ಪತ್ರೆಯೊಂದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

Your email address will not be published. Required fields are marked *