ಐಪಿಎಲ್​ನಲ್ಲಿ ಧೋನಿಗೆ ‘ಶತಕ’ದ ಸಂಭ್ರಮ..!

ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಚೆನ್ನೈ ಸೂಪರ್​ಕಿಂಗ್ಸ್​ ತಂಡದ ನಾಯಕ ಎಂ.ಎಸ್.ಧೋನಿ, ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. ನೆನ್ನೆ ಜೈಪುರದಲ್ಲಿ ರಾಜಸ್ಥಾನ್ ರಾಯಲ್ಸ್​ ವಿರುದ್ಧದ ಗೆಲುವು, ನಾಯಕನಾಗಿ ಧೋನಿಯ 100ನೇ ಪಂದ್ಯದ ಗೆಲುವಾಗಿತ್ತು. ಇದುವರೆಗೂ 152 ಪಂದ್ಯಗಳಲ್ಲಿ ಚೆನ್ನೈ ಸೂಪರ್​ಕಿಂಗ್ಸ್ ತಂಡವನ್ನ ಮುನ್ನಡೆಸಿರುವ ಧೋನಿ, 95 ಪಂದ್ಯಗಳಲ್ಲಿ ತಂಡಕ್ಕೆ ಗೆಲುವು ತಂದುಕೊಟ್ಟಿದ್ದಾರೆ. ಹಾಗೇ 2016-17ರಲ್ಲಿ ರೈಸಿಂಗ್ ಪುಣೆ ಸೂಪರ್​ಜೈಂಟ್ಸ್ ತಂಡದ ನಾಯಕನಾಗಿದ್ದ ಧೋನಿ, 5 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದಾರೆ. ಐಪಿಎಲ್​ನಲ್ಲಿ ಒಟ್ಟಾರೆ 166 ಪಂದ್ಯಗಳಲ್ಲಿ ನಾಯಕನಾಗಿ ತಂಡವನ್ನ ಮುನ್ನಡೆಸಿರುವ ಮಾಹಿ, 100 ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದಾರೆ. ಈ ಸಾಧನೆ ಮಾಡಿದ ಮೊದಲ ನಾಯಕ ಎಂಬ ಹೆಗ್ಗಳಿಕೆಗೆ ಧೋನಿ ಪಾತ್ರರಾಗಿದ್ದಾರೆ.