ವರದಕ್ಷಿಣೆ ಕಿರುಕುಳ ನೀಡಿ ಕೊಲೆ

ಹಾವೇರಿ: ವರದಕ್ಷಿಣೆ ಕಿರುಕುಳ ನೀಡಿ ಮಹಿಳೆಯನ್ನು ಕೊಲೆ ಮಾಡಿರುವ ಘಟನೆ ಹಾವೇರಿ ತಾಲ್ಲೂಕಿನ ನೆಲೋಗಲ್ ಗ್ರಾಮದಲ್ಲಿ ನಡೆದಿದೆ. 27 ವರ್ಷದ ಸುವರ್ಣ ಹೊನ್ನತ್ತಿ ಮೃತ ಮಹಿಳೆಯಾಗಿದ್ದಾರೆ. ಹಲವು ತಿಂಗಳಿನಿಂದ ವರದಕ್ಷಿಣೆಗಾಗಿ ಗಂಡ, ಅತ್ತೆ, ಮಾವ ಕಿರುಕುಳ ನೀಡುತ್ತಿದ್ರು. ಅವರೇ ಕೊಲೆ ಮಾಡಿದ್ದಾರೆ ಎಂದು ಸುವರ್ಣ ಕುಟುಂಬಸ್ಥರು ಆರೋಪಿಸಿದ್ದಾರೆ. ಸದ್ಯ ಪತಿ ಅಶೋಕ್ ಹೊನ್ನತಿ, ಮಾವ, ಅತ್ತೆಯ ವಿರುದ್ಧ ಕೊಲೆ ಆರೋಪ ಕೇಳಿಬಂದಿದ್ದು, ಪತಿ ಅಶೋಕ ಸ್ಥಳದಿಂದ ಪರಾರಿಯಾಗಿದ್ದಾನೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ಹಾವೇರಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv