ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಮರಿತಿಬ್ಬೇಗೌಡಗೆ ಗೆಲುವು

ಮೈಸೂರು: ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಉಪ ಸಭಾಪತಿ, ಜೆಡಿಎಸ್‌ನ ಮರಿತಿಬ್ಬೇಗೌಡರು ವಿಜಯ ಪತಾಕೆ ಹಾರಿಸಿದ್ದಾರೆ. ಈ ಮೂಲಕ ಮರಿತಿಬ್ಬೇಗೌಡ ಸತತವಾಗಿ ನಾಲ್ಕನೇ ಬಾರಿ ವಿಧಾನ ಪರಿಷತ್​ಗೆ ಆಯ್ಕೆಯಾಗಿದ್ದಾರೆ. ಎರಡನೇ ಪ್ರಾಶಸ್ತ್ಯ ಮತಗಳ ಎಣಿಕೆ ಮುಕ್ತಾಯದ ಬಳಿಕ 360 ಮತಗಳ ಅಂತರದಿಂದ ಕಾಂಗ್ರೆಸ್​ನ ಅಭ್ಯರ್ಥಿ ಎಂ.‌ಲಕ್ಷ್ಮಣ್​ಗೆ ಸೋಲುಣಿಸಿದ್ದಾರೆ.

ಮರಿತಿಬ್ಬೇಗೌಡರ ಗೆಲುವಿನ ಸುದ್ದಿ ತಿಳಿಯುತ್ತಿದ್ದಂತೆ, ಮತ ಎಣಿಕೆ ಕೇಂದ್ರದ ಮುಂಭಾಗದಲ್ಲಿ ಜೆಡಿಎಸ್ ಕಾರ್ಯಕರ್ತರು ಜಮಾಯಿಸಿದ್ರು. ಪಡುವಾರಹಳ್ಳಿ ಮತ ಕೇಂದ್ರದ ಮುಂಭಾಗದಲ್ಲಿ ಸಂಭ್ರಮಾಚರಣೆ ಮಾಡಿದ್ರು.
ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ:cantact@firstnews.tv