ಶ್ರೀಲಂಕಾ ಸರಣಿ ಸ್ಫೋಟ: ನಾಗರಾಜ ರೆಡ್ಡಿ ಪಾರ್ಥಿವ ಶರೀರ ರಾಮಯ್ಯ ಆಸ್ಪತ್ರೆಗೆ ರವಾನೆ

ಬೆಂಗಳೂರು: ಶ್ರೀಲಂಕಾದಲ್ಲಿ ಉಗ್ರರ ದಾಳಿಯಲ್ಲಿ ಮೃತಪಟ್ಟಿದ್ದ ಕಾಂಗ್ರೆಸ್ ಮುಖಂಡ ರಾಮಲಿಂಗಾ ರೆಡ್ಡಿ ಅವರ ಸಂಬಂಧಿ ನಾಗರಾಜ ರೆಡ್ಡಿ ಪಾರ್ಥಿವ ಶರೀರವನ್ನು ಇಂದು ರಾತ್ರಿ  ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತರಲಾಯಿತು. ಗೃಹ ಸಚಿವ ಎಂಬಿ ಪಾಟೀಲ್​ ಅವರು ಸ್ಥಳದಲ್ಲಿದ್ದು ಅಂತಿಮ ದರ್ಶನ ಪಡೆದರು.
ನಾಗರಾಜ ರೆಡ್ಡಿ ಪಾರ್ಥಿವ ಶರೀರವನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಇರಿಸಲು ಕುಟುಂಬಸ್ಥರು ನಿರ್ಧರಿಸಿದ್ದು, ನಾಳೆ ಬೆಳಿಗ್ಗೆ ಪಾರ್ಥಿವ ಶರೀರವನ್ನು ಆಸ್ಪತ್ರೆಯಿಂದ ಬಿಟಿಎಂ ಲೇಔಟ್‌ನಲ್ಲಿರುವ ರೆಡ್ಡಿ ನಿವಾಸಕ್ಕೆ ಕೊಂಡ್ಯೊಯ್ಯಲಾಗತ್ತೆ ಎಂದು ತಿಳಿದು ಬಂದಿದೆ. ಬಳಿಕ ನಿವಾಸದಲ್ಲಿಯೇ ಪಾರ್ಥಿವ ಶರೀರದ ಅಂತಿಮ ‌ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಂತೆ. ಸದ್ಯ, ಮಾಜಿ ಸಚಿವ ರಾಮಲಿಂಗಾ ರೆಡ್ಡಿ, ಶಾಸಕಿ ಸೌಮ್ಯ ರೆಡ್ಡಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲಿದ್ದಾರೆ. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕೂಡಾ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.