ಮೈದುಂಬಿ ಹರಿಯುತ್ತಿದೆ ನಾಗರಾಳ ಜಲಾಶಯ

ಕಲಬುರ್ಗಿ: ಮುಂಗಾರು ಪೂರ್ವದಲ್ಲಿ ಸುರಿದ ಭಾರೀ ಮಳೆಗೆ ಚಿಂಚೋಳಿ ತಾಲೂಕಿನ ನಾಗರಾಳ ಜಲಾಶಯ ತುಂಬಿ ಹರಿಯುತ್ತಿದ್ದು, ರೈತರಲ್ಲಿ ಸಂತಸ ಮೂಡಿಸಿದೆ.
ತಾಲೂಕಿನ ರೈತರ ಜೀವನಾಡಿಯಾಗಿರುವ ಕೆಳದಂಡೆ ಮುಲ್ಲಾಮಾರಿ ಯೋಜನೆಯ ನಾಗರಾಳ ಜಲಾಶಯದ ನೀರಿನ ಮಟ್ಟ ಹೆಚ್ಚಾಗಿದೆ. ಇನ್ನು ಜಲಾಶಯದಲ್ಲಿ ಸಂಗ್ರಹವಾಗಿರುವ ನೀರುನ್ನು ನೋಡಲು ನೂರಾರು ರೈತರು ಮತ್ತು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಜಲಾಶಯದ ಅಭಿವೃದ್ಧಿಗಾಗಿ ಕಳೆದ ವರ್ಷ‌ ಕೈಗೆತ್ತಿಕೊಂಡ ಕಾಮಗಾರಿಗೆ ಮಳೆ ಅಡ್ಡಿಯಾಗಿದೆ. ಸದ್ಯ ಜಲಾಶಯದ ಬಂಡ್‌ ಮೇಲಿನ ರಸ್ತೆ ಹಾಗೂ ಅದರ ಕೆಳಭಾಗದ ರಸ್ತೆ ಅಭಿವೃದ್ಧಿಪಡಿಸಿ ಡಾಂಬರೀಕರಣ ಮಾಡಲಾಗುತ್ತಿದೆ.‌

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv