ಎಲೆಕ್ಷನ್​​ಗಾಗಿ ‘ಕೈ’ ಪ್ಲಾನ್, ಕೆಪಿಸಿಸಿ ಉಪಾಧ್ಯಕ್ಷರಾಗಿ ಸೂರ್ಯನಾರಾಯಣ ನೇಮಕ

ಬಳ್ಳಾರಿ: ಬಳ್ಳಾರಿ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗಾಗಿ ಹಿರಿಯ ಮುಖಂಡರಿಗೆ ಕೆಪಿಸಿಸಿ ಉಪಾಧ್ಯಕ್ಷ ಸ್ಥಾನ ನೀಡಿ ಎಐಸಿಸಿ ಆದೇಶ ಹೊರಡಿಸಿದೆ. ಬಳ್ಳಾರಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮೂರ್ನಾಲ್ಕು ಕ್ಷೇತ್ರಗಳಲ್ಲಿ ಪ್ರಾಬಲ್ಯ ಹೊಂದಿರುವ, ಹಿರಿಯ ಕಾಂಗ್ರೆಸ್ ಮುಖಂಡ, ಮಾಜಿ ಶಾಸಕರಾದ ನಾರಾ ಸೂರ್ಯನಾರಾಯಣ ರೆಡ್ಡಿಯವರನ್ನು ಕೆಪಿಸಿಸಿ ಉಪಾಧ್ಯಕ್ಷರನ್ನಾಗಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇಮಕಗೊಳಿಸಿ ಆದೇಶ ಹೊರಡಿಸಿದೆ.

ತುಮಕೂರು ಜಿಲ್ಲಾಧ್ಯಾಕ್ಷರನ್ನಾಗಿ ಆರ್. ರಾಮಕೃಷ್ಣ ಅವರನ್ನ ಮತ್ತು ಗದಗ ಜಿಲ್ಲಾ ಜಿಲ್ಲಾಧ್ಯಾಕ್ಷರಾಗಿ ಮಾಜಿ ಶಾಸಕ ಜಿ.ಎಸ್​. ಪಾಟೀಲ್​ ಅವರನ್ನ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: conatct@firstnews.tv