ಗೌರಿ ಹತ್ಯೆ ಪ್ರಕರಣ: ಆರೋಪಿ ನವೀನ್​​ಗೆ ಮತ್ತೆ ನ್ಯಾಯಾಂಗ ಬಂಧನ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಅರೆಸ್ಟ್​ ಆಗಿರುವ ನವೀನ್​ ಅಲಿಯಾಸ್ ಹೊಟ್ಟೆ ಮಂಜಗೆ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆ ಆಗಿದೆ. ಹೆಚ್ಚಿನ ವಿಚಾರಣೆ ಹಿನ್ನೆಲೆಯಲ್ಲಿ 14 ದಿನಗಳ ಕಾಲ ನವೀನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇಂದು ಆರೋಪಿ ನವೀನ್ ಕುಮಾರ್ ನ್ಯಾಯಾಂಗ ಬಂಧನ ಅಂತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಆರೋಪಿ ನವೀನನ್ನು ಅಧಿಕಾರಿಗಳು ಪರಪ್ಪನ ಅಗ್ರಹಾರದಿಂದ ವಿಡಿಯೋ ಕಾನ್ಫರೆನ್ಸ್​ ಮೂಲಕ 3ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್,​ ಆರೋಪಿ ನವೀನ್​ಗೆ ಮತ್ತೆ 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಜೂನ್ 25ರವೆರೆಗೆ ವಿಸ್ತರಣೆ ಮಾಡಿ ನ್ಯಾಯಮೂರ್ತಿ ವೆಂಕಣ್ಣ ಹೊಸಮುನಿ ಆದೇಶ ನೀಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv