ಮೈದುಂಬಿ ಹರಿಯುತ್ತಿವೆ ನೇತ್ರಾವತಿ, ಕುಮಾರಧಾರ ನದಿಗಳು

ಮಂಗಳೂರು: ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ವರುಣನ ಅಬ್ಬರ ಜೋರಾಗಿದೆ. ಇನ್ನೂ ಉತ್ತಮ ಮಳೆಯಾಗುತ್ತಿರುವುದರಿಂದ ಬಹುತೇಕ ನದಿಗಳು ತುಂಬಿ ಹರಿಯುತ್ತಿವೆ. ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆ ಹಿನ್ನಲೆಯಲ್ಲಿ ನೇತ್ರಾವತಿ, ಕುಮಾರಧಾರ ನದಿ ತುಂಬಿ ಹರಿಯುತ್ತಿದೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಾಧಾರಾ ನದಿ ನೀರು ಹರಿವು ಹೆಚ್ಚಳವಾಗಿದೆ. ನೀರಿನ ಹರಿವು ಹೆಚ್ಚಳದಿಂದ ದಡದಿಂದಲೇ ಭಕ್ತರ ತೀರ್ಥ ಸ್ನಾನ ಮಾಡುವಂತಾಗಿದ್ದು, ನದಿಗೆ ಇಳಿಯದಂತೆ ಪೊಲೀಸರು ಸೂಚನೆ ನೀಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv