ಕಾಂಗ್ರೆಸ್​ ಕಚೇರಿಗೆ ಕೆಪಿಸಿಸಿ ನೂತನ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷರ ಭೇಟಿ

ಬೆಂಗಳೂರು: ಕೆಪಿಸಿಸಿ ನೂತನ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಕಾಂಗ್ರೆಸ್​ ಕಚೇರಿಗೆ ಭೇಟಿ ಕೊಟ್ಟರು. ಪದಗ್ರಹಣ ಮಾಡಿದ ಬಳಿಕ ಕಚೇರಿಗೆ ಮೊದಲ ಭೇಟಿ ನೀಡಿದ ಅಧ್ಯಕ್ಷ ಹಾಗೂ ಕಾರ್ಯಾಧ್ಯಕ್ಷರಿಗೆ ನಿರ್ಗಮಿತ ಅಧ್ಯಕ್ಷ ಜಿ.ಪರಮೇಶ್ವರ್, ಔಪಚಾರಿಕವಾಗಿ ಅಧಿಕಾರ ಹಸ್ತಾಂತರ ಮಾಡಿದರು.

ಅರಮನೆ ಮೈದಾನದಲ್ಲಿ ಇಂದು ಕೆಪಿಸಿಸಿಯ ನೂತನ ಅಧ್ಯಕ್ಷರಾಗಿ ದಿನೇಶ್ ಗೂಂಡುರಾವ್ ಹಾಗೂ ಕೆಪಿಸಿಸಿಯ ನೂತನ ಕಾರ್ಯಾಧ್ಯಕ್ಷರಾಗಿ ಈಶ್ವರ್ ಖಂಡ್ರೆ ಅಧಿಕಾರ ಸ್ವೀಕಾರ ಮಾಡಿದರು. ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಬಾವುಟ ನೀಡುವ ಮೂಲಕ ದಿನೇಶ್ ಗುಂಡೂರಾವ್​ಗೆ ಮಾಜಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್​ ಅಧಿಕೃತವಾಗಿ ಅಧಿಕಾರ ಹಸ್ತಾಂತರ ಮಾಡಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv