ನವಜಾತ ಶಿಶುವಿನ ಮೃತ ದೇಹ ಪತ್ತೆ!

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕಿನ ಚಿಕ್ಕಜಂತಕಲ್​ ಕಾಲುವೆಯಲ್ಲಿ ನವಜಾತ ಗಂಡು ಶಿಶುವಿನ ಮೃತದೇಹವೊಂದು ಪತ್ತೆಯಾಗಿದೆ. ನಿನ್ನೆ ಸಂಜೆ ಕಾಲುವೆಯಲ್ಲಿ ಬಟ್ಟೆ ತೊಳೆಯಲು ಹೋದ ಮಹಿಳೆಯರಗೆ ಮೃತದೇಹ ಕಂಡುಬಂದಿದೆ. ಸುದ್ದಿ ತಿಳಿದು ಸ್ಥಳಕ್ಕೆ ಬಂದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇನ್ನು, ಗಂಗಾವತಿ ಗ್ರಾಮೀಣ ಪೊಲೀಸರು ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಮುಂದುವರಿಸಿದ್ದಾರೆ.