ಮಂಡ್ಯದಲ್ಲಿ ನಿಖಿಲ್ ಭಾರೀ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ: ದಿನೇಶ್ ಗುಂಡೂರಾವ್

ದಾವಣಗೆರೆ: ಮೋದಿಯವರ ಹೇಳಿಕೆಯಿಂದ ಸುಮಲತಾ ಬಿಜೆಪಿ ಅಭ್ಯರ್ಥಿ ಎಂಬುದು ಗೊತ್ತಾಗಿದೆ. ಮಂಡ್ಯದಲ್ಲಿ ನಿಖಿಲ್ ಭಾರೀ ಅಂತರದಲ್ಲಿ ಗೆಲುವು ಸಾಧಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಹೇಳಿದ್ದಾರೆ. ದಾವಣಗೆರೆ ಕಾಂಗ್ರೆಸ್ ಅಭ್ಯರ್ಥಿ ಎಚ್. ಬಿ ಮಂಜಪ್ಪ ಪರ ಪ್ರಚಾರಕ್ಕೆಂದು ನಗರಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಅವರು, ದಾವಣಗೆರೆಯಲ್ಲಿ ಲೋಕಸಭಾ ಸದಸ್ಯರ ಸಾಧನೆ ಏನೂ ಇಲ್ಲ. ಹೀಗಾಗಿ ಮಂಜಪ್ಪನವರ ಗೆಲುವು ಖಚಿತ. ಮೋದಿಯವರ ಹೇಳಿಕೆಯಿಂದ ಸುಮಲತಾ ಬಿಜೆಪಿ ಅಭ್ಯರ್ಥಿ ಆನ್ನೋದು ಗೊತ್ತಾಗಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.

ರಾಜ್ಯದಲ್ಲಿ ಆದಾಯ ತೆರಿಗೆ ಇಲಾಖೆ ಬಿಜೆಪಿ ಬ್ರಾಂಚ್ ಆಗಿ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ಭಯದ ವಾತಾವರಣ ಸೃಷ್ಟಿ ಮಾಡಲು ಆದಾಯ ತೆರಿಗೆ ಇಲಾಖೆ ಬಳಕೆ ಮಾಡಲಾಗ್ತಿದೆ. ಏರ್ ಸ್ಟೈಕ್, ಚುನಾವಣೆ ವಿಚಾರವಾಗಿ ಮೋದಿ ಬಳಕೆ ಮಾಡುತ್ತಿದ್ದಾರೆ. ಪ್ರತಿಯೊಂದು ಸಂಸ್ಥೆಯನ್ನು ಸರ್ವನಾಶ ಮಾಡಿದ್ದಾರೆ. ಯಡಿಯೂರಪ್ಪ ಮನೆ ಮೇಲೆ ಯಾಕೆ ದಾಳಿ ನಡೆಯೋಲ್ಲ? ಯಡಿಯೂರಪ್ಪ ₹ 200, ₹ 300 ಕೋಟಿ ಹಣವನ್ನು ಮನೆಯಲ್ಲಿ ಇಟ್ಟುಕೊಂಡು ಆಪರೇಶನ್ ಕಮಲ ಮಾಡ್ತಾರೆ ಎಂದು ಗುಂಡೂರಾವ್ ಆರೋಪಿಸಿದರು.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv