ಕೇರಳ ಗಡಿ ಜಿಲ್ಲೆಗಳಲ್ಲಿ ನಿಫಾ ಅಟ್ಯಾಕ್? ಹೆಚ್​ಡಿಕೆ ಕಟ್ಟೆಚ್ಚರ

ಬೆಂಗಳೂರು: ಕೇರಳ ರಾಜ್ಯಕ್ಕೆ ಹೊಂದಿಕೊಂಡಂತಿರುವ ರಾಜ್ಯದ ಗಡಿ ಜಿಲ್ಲೆಗಳಲ್ಲಿ ನಿಫಾ ವೈರಾಣು ಸೋಂಕು ನಿಯಂತ್ರಣಕ್ಕೆ ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆರೋಗ್ಯಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಕೇರಳದ ಉತ್ತರ ಜಿಲ್ಲೆಗಳಲ್ಲಿ ಈ ಸೋಂಕಿಗೆ ಇದುವರೆಗೆ 10 ಮಂದಿ ಬಲಿಯಾಗಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಕೇರಳದಿಂದ ಬಂದಿರುವ ಇಬ್ಬರಿಗೆ ನಿಫಾ ಸೋಂಕು ತಗುಲಿರಬಹುದು ಎನ್ನುವ ಅನುಮಾನಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv