ತಮಿಳುನಾಡಿಗೆ ಇಂದು ಕೆಎಸ್​ಆರ್​ಟಿಸಿ ಬಸ್ ಹೋಗಲ್ಲ!

ಆನೇಕಲ್: ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ ತಮಿಳುನಾಡು ಬಂದ್ ಹಿನ್ನೆಲೆಯಲ್ಲಿ ಕೆಎಸ್​ಆರ್​ಟಿಸಿ ಬಸ್​ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ತಮಿಳುನಾಡಿಗೆ ತೆರಳುವ ರಾಜ್ಯ ಸಾರಿಗೆ ಬಸ್​​ ಸೇವೆ ಸ್ಥಗಿತಗೊಳಿಸಿದೆ. ಕಾವೇರಿ ನಿರ್ವಹಣಾ ಮಂಡಳಿಗೆ ಆಗ್ರಹಿಸಿ ತಮಿಳುಪರ ಸಂಘಟನೆಗಳು ಇಂದು ‘ತಮಿಳುನಾಡು ಬಂದ್’​ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಅತ್ತಿಬೆಲೆ ಮೂಲಕ ತಮಿಳುನಾಡಿಗೆ ಹೋಗುವ ಎಲ್ಲಾ ಕೆಎಸ್​ಆರ್​ಟಿಸಿ ಬಸ್​ಗಳ ಸಂಚಾರವನ್ನು ಸಂಜೆ 6 ಗಂಟೆವರೆಗೂ ಸ್ಥಗಿತಗೊಳಿಸಲಾಗಿದೆ. ಬೆಳಗ್ಗೆ 250ಬಸ್​, ರಾತ್ರಿ 200 ಬಸ್​ ಸಂಚಾರ ವ್ಯವಸ್ಥೆಯಿದ್ದು ಪೊಲೀಸ್​ ಇಲಾಖೆಯಿಂದ ಅನುಮತಿ ಪಡೆದು ಸಂಚಾರ ಆರಂಭಿಸುವುದಾಗಿ ಕೆಎಸ್​ಆರ್​ಟಿಸಿ ಹೇಳಿದೆ. ಇನ್ನು ಅತ್ತಿಬೆಲೆ ಗಡಿಯಲ್ಲಿ ಪೊಲೀಸ್ ಬಿಗಿ ಭದ್ರತೆ ವಹಿಸಲಾಗಿದೆ.

ಇನ್ನು ತಮಿಳುನಾಡಿನಲ್ಲಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಕೆಎಸ್​ಆರ್​ಟಿಸಿ ಬಸ್​ಗಳ ಮೇಲೆ ಕಲ್ಲು ತೂರಾಟ ಮಾಡಿದ ಘಟನೆ ಇಂದು ಬೆಳಗಿನಜಾವ ನಡೆದಿದೆ. ಬೆಂಗಳೂರಿನಿಂದ ಕೃಷ್ಣಗಿರಿಗೆ ಹೊರಟ್ಟಿದ್ದ ಬಸ್​ವೊಂದಕ್ಕೆ ದುಷ್ಕರ್ಮಿಗಳು ಕಲ್ಲಿನಿಂದ ಹೊಡೆದಿದ್ದು, ಬಸ್​ನ ಹಿಂಬದಿಯ ಗ್ಲಾಸ್ ಸಂಪೂರ್ಣ ಜಖಂಗೊಂಡಿದೆ.

Leave a Reply

Your email address will not be published. Required fields are marked *