ಪುಲ್ವಾಮಾ ದಾಳಿ ವಿಚಾರವನ್ನು ಯಾರೂ ರಾಜಕೀಯಕ್ಕೆ ಬಳಸಬಾರದು-ಖರ್ಗೆ

ಕಲಬುರ್ಗಿ: ಕಾಶ್ಮೀರದ ಪುಲ್ವಾಮಾ ಬಳಿ ನಡೆದ ಉಗ್ರರ ದಾಳಿ ವಿಚಾರವನ್ನು ಯಾರೂ ರಾಜಕೀಯಕ್ಕೆ ಬಳಸಬಾರದು. ದೇಶದ ಸುರಕ್ಷತೆ ದೃಷ್ಟಿಯಿಂದ ನಾವೆಲ್ಲರೂ ಒಗ್ಗೂಡಿ ಸೈನಿಕರ ಬೆಂಬಲಕ್ಕೆ ನಿಂತು‌ ನೈತಿಕ ಧೈರ್ಯ ತುಂಬಬೇಕು ಎಂದು ಲೋಕಸಭೆ ಕಾಂಗ್ರೆಸ್​ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಇದರಲ್ಲಿ ಕ್ರೆಡಿಟ್, ಡಿಸ್‌ಕ್ರೆಡಿಟ್ ಪ್ರಶ್ನೆ ಇಲ್ಲ. ನಮ್ಮ ಸೈನ್ಯ ಕೈಗೊಳ್ಳುವ ನಿರ್ಧಾರಕ್ಕೆ ಬೆಂಬಲಿಸುವ ಪ್ರಸ್ತಾವನೆಗೆ ಸರ್ವಪಕ್ಷ ಸಭೆಯಲ್ಲಿ ಒಮ್ಮತ ಸೂಚಿಸಿದ್ದೇವೆ. ಪ್ರಧಾನಿ ಮೋದಿ ಸ್ವಭಾವ ಏನು ಎಂಬುದು ಎಲ್ಲರಿಗೂ ಗೊತ್ತಿದೆ, ಈ‌ ಸಮಯದಲ್ಲಿ ಅದನ್ನು ಮಾತನಾಡಲ್ಲ. ನಾವೆಲ್ಲರೂ ಒಗ್ಗೂಡಿ ಸೇನೆಯ ಬೆಂಬಲಕ್ಕೆ ನಿಲ್ಲಬೇಕು ಎಂಬುದು ನನ್ನ ಅಭಿಪ್ರಾಯ ಎಂದರು. ಇನ್ನು, ಪುಲ್ವಾಮಾ ಉಗ್ರರ ದಾಳಿ ವಿಚಾರವಾಗಿ ನವಜೋತ್ ಸಿಂಗ್ ಸಿಧು ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಸೈನಿಕರನ್ನು ಕುಗ್ಗಿಸುವಂತಹ ಮಾತುಗಳನ್ನು ಯಾರೂ ಕೂಡ ಆಡಬಾರದು ಎಂದು ಹೇಳಿದರು.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv