RDPR ವಿ.ವಿ.ಕಾರ್ಯಕ್ರಮಕ್ಕೆ ಸಚಿವ ಕೃಷ್ಣಭೈರೇಗೌಡರಿಗಿಲ್ಲ ಆಹ್ವಾನ

ಗದಗ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಮೊದಲ ಕಾರ್ಯಕ್ರಮದಲ್ಲೇ ಯಡವಟ್ಟು ಮಾಡಿಕೊಂಡಿದೆ. ವಿಶ್ವವಿದ್ಯಾಲಯ ರಾಷ್ಟ್ರೀಯ ಸಮ್ಮೇಳನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೃಷ್ಣ ಭೈರೇಗೌಡರ ಹೆಸರನ್ನು ಆಮಂತ್ರಣ ಪತ್ರಿಕೆಯಲ್ಲಿ ಆಹ್ವಾನಿಸದೇ ಶಿಷ್ಟಾಚಾರವನ್ನು ಉಲ್ಲಂಘಿಸಿದೆ. ವಿಶ್ವವಿದ್ಯಾಲಯ ಆಡಳಿತ ಮಂಡಳಿಯ ನಿರ್ಲಕ್ಷ್ಯ ಈಗ ತೀವ್ರ ಚರ್ಚೆಗೆ ಗುರಿಯಾಗಿದೆ.

ಗದಗ ನಗರದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್​​ ವಿಶ್ವವಿದ್ಯಾಲಯದ ರಾಷ್ಟ್ರೀಯ ಸಮ್ಮೇಳನ ನಡೆಯುತ್ತಿದೆ. ವಿವಿಯಿಂದ ಆರಂಭಗೊಂಡ ಮೊದಲ ಕಾರ್ಯಕ್ರಮದಲ್ಲಿ ಸಚಿವರಿಗೆ ಅಹ್ವಾನ ನೀಡಿಲ್ಲ.  ಶಾಸಕ ಹೆಚ್​.ಕೆ. ಪಾಟೀಲ್​ ಹಾಗೂ ಅವರ ಸಹೋದರ ಮಾಜಿ ಶಾಸಕ ಡಿ. ಆರ್​​. ಪಾಟೀಲ್​​ ಸೇರಿದಂತೆ ಇನ್ನಿತರ ಅಧಿಕಾರಿಗಳಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಸಚಿವರಿಗೆ ಆಹ್ವಾನ ನೀಡದೇ ಶಿಷ್ಟಾಚಾರ ಉಲ್ಲಂಘಿಸಿರೋ ಗದಗ ಆರ್​.ಡಿ.ಪಿ.ಆರ್​. ವಿವಿ ಕುಲಪತಿ ಪ್ರೊ. ಬಿ. ತಿಮ್ಮೇಗೌಡ, ಕುಲಸಚಿವ ಡಾ. ಸುರೇಶ್​​ ನಾಡಗೌಡರ ವಿರುದ್ಧ ಇದೀಗ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv