ಬಡ್ತಿ ಮೀಸಲಾತಿ ಕಾಯ್ದೆ ಜಾರಿಗೊಳಿಸದಂತೆ ‘ಅಹಿಂಸಾ ನೌಕರರ’ ಪ್ರತಿಭಟನೆ

ಧಾರವಾಡ: ಬಡ್ತಿ ಮೀಸಲಾತಿ ಕಾಯ್ದೆ-2018 ನ್ನು ಜಾರಿಗೊಳಿಸಬಾರದು ಎಂದು ಆಗ್ರಹಿಸಿ ಅಹಿಂಸಾ ಒಕ್ಕೂಟದ ನೌಕರರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಸಾವಿರಾರು ನೌಕರರು ಭಾಗವಹಿಸಿದ್ದರು. ಈ ಕೂಡಲೇ ಸರ್ಕಾರ ಈ ಕಾಯ್ದೆಯನ್ನ ವಾಪಸ್ ಪಡೆಯಬೇಕೆಂದು ಕರ್ನಾಟಕ ರಾಜ್ಯ ಹಿಂದುಳಿದ ಮತ್ತು ಅಲ್ಪಸಂಖ್ಯಾತ ಹಾಗೂ ಸಾಮಾನ್ಯ ವರ್ಗದ ನಿವೃತ್ತ ಸರ್ಕಾರಿ, ಅರೆಸರ್ಕಾರಿ ನೌಕರರ ಹಿತರಕ್ಷಣಾ ಒಕ್ಕೂಟದ ನೌಕರರು ಆಗ್ರಹಿಸಿದರು. ಅಲ್ಲದೇ ಸುಪ್ರಿಂ ಕೋರ್ಟ್​ ಆದೇಶದಂತೆ ಯಥಾಸ್ಥಿತಿ ಕಾಪಾಡಲು ನೌಕರರು ಸರ್ಕಾರಕ್ಕೆ ಮನವಿ ಮಾಡಿದರು. ಇದು ಮುಂದುವರೆದರೆ ರಾಜ್ಯಾದ್ಯಂತ ಅಸಹಕಾರ ಚಳುವಳಿ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv