ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ವಿಶೇಷ ಪ್ಯಾಕೇಜ್​ ನೀಡಿ: ಯು.ಟಿ ಖಾದರ್

ಬೆಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಮಳೆಯಿಂದ ಆದ ಹಾನಿಗೆ, 75 ಕೋಟಿ ವಿಶೇಷ ಅನುದಾನ ನೀಡುವಂತೆ ಸಿಎಂ ಕುಮಾರಸ್ವಾಮಿಗೆ ಸಚಿವ ಯು.ಟಿ ಖಾದರ್ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಯು.ಟಿ ಖಾದರ್, ಇಬ್ಬರ ಸಾವಿಗೆ 5 ಲಕ್ಷ ಪರಿಹಾರ ನೀಡಲಾಗಿದೆ. ಅಲ್ಲದೇ ಸೇತುವೆಗಳ, ರಸ್ತೆಗಳ ದುರಸ್ಥಿ ನಡೆಯಬೇಕಿದೆ. ದುರಸ್ಥಿ ಕಾರ್ಯ ಕೈಗೊಳ್ಳಲು 75 ಕೋಟಿ ಅನುದಾನವನ ಬೇಕಿದೆ ಅಂತಾ ಹೇಳಿದರು. ಈ ಕುರಿತು ಜಿಲ್ಲಾಧಿಕಾರಿ ಸಸಿಕಾಂತ್​ ಸೆಂಥಿಲ್​ಗೆ ಮನವಿ ಸಲ್ಲಿಸಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv