ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್​​ ಅಭ್ಯರ್ಥಿ ಜಯಭೇರಿ

ಕಲಬುರ್ಗಿ: ಈಶಾನ್ಯ ಪದವೀಧರ ಕ್ಷೇತ್ರದ‌ ಪರಿಷತ್​ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ‌ ಚಂದ್ರಶೇಖರ್ ಪಾಟೀಲ್​​​ ಜಯಭೇರಿ ಬಾರಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ‌ ಚಂದ್ರಶೇಖರ್ ಪಾಟೀಲ್ 321 ಮತಗಳ‌ ಅಂತರದಿಂದ ಬಿಜೆಪಿ ಅಭ್ಯರ್ಥಿ ಕೆ.ಬಿ. ಶ್ರೀನಿವಾಸ್​ರಾವ್ ಅವರನ್ನ ಸೋಲಿಸಿದ್ದಾರೆ.

ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಕೆ.ಬಿ. ಶ್ರೀನಿವಾಸ್​​ ಮುನ್ನಡೆ ಸಾಧಿಸಿದ್ದರು. ಆದ್ರೆ, ಎರಡನೇ ಸುತ್ತಿನ ಮತ ಎಣಿಕೆಯಲ್ಲಿ ಕಾಂಗ್ರೆಸ್​ ಮುನ್ನಡೆ ಗಳಿಸಿತು. ಬೆಳಗಿನ ಜಾವ ನಾಲ್ಕು ಗಂಟೆಗೆ ಚುನಾವಣಾ ಫಲಿತಾಂಶ ಅಧಿಕೃತವಾಗಿ ಪ್ರಕಟವಾಯಿತು. ಇನ್ನು ಜೆಡಿಎಸ್​ ಅಭ್ಯರ್ಥಿ ಪ್ರತಾಪ್​ ರೆಡ್ಡಿ 13,311 ಹಾಗೂ ಕನ್ನಡ ಚಳುವಳಿ ಪಕ್ಷದ ವಾಟಾಳ್‌​ ನಾಗರಾಜ್​ 437 ಮತ ಗಳಿಸಿದ್ದಾರೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ಕೊಪ್ಪಳ‌ ಮತ್ತು ಹರಪನಹಳ್ಳಿ ತಾಲೂಕುಗಳನ್ನ ಒಳಗೊಂಡಿದ್ದ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿ ಜಯಭೇರಿ ಬಾರಿಸಿದ್ದಾರೆ. ಗುಲ್ಬರ್ಗಾ ವಿಶ್ವವಿದ್ಯಾಯಲದಲ್ಲಿ ಮತ ಎಣಿಕೆ ನಡೆಯಿತು. ಕಲಬುರ್ಗಿ ವಿಭಾಗದ ಪ್ರಾದೇಶಿಕ ಆಯುಕ್ತ ಪಂಕಜ್‌ಕುಮಾರ್ ಪಾಂಡೆ ಫಲಿತಾಂಶ ಪ್ರಕಟಿಸಿದರು.
ಚಂದ್ರಶೇಖರ್ ಪಾಟೀಲ್​​​ ಜಯಶೀಲರಾಗಿದ್ದಕ್ಕೆ, ನಗರದಲ್ಲಿ‌ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ ನಡೆಸಿದರು. ನಗರದ ಜಿಲ್ಲಾ ಕಾಂಗ್ರೆಸ್ ‌ಕಚೇರಿ ಎದುರು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಜಗದೇವ್ ಗುತ್ತೇದಾರ್ ನೇತೃತ್ವದಲ್ಲಿ ಸಿಹಿ‌ಹಂಚಿ‌ ವಿಜಯೋತ್ಸವ ಆಚರಿಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv