ಯೋಗೇಶ್ವರ್​ಗೆ ಹೆಚ್​ಡಿಕೆಿಯಿಂದ ಲೀಗಲ್‌ ನೋಟಿಸ್‌

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಮಾಡಿದ್ದ ಸಿ.ಪಿ.ಯೋಗೇಶ್ವರ್​ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಾನೂನು ಸಮರ ಸಾರಿದ್ದಾರೆ. ಸಿ.ಪಿ.ಯೋಗೇಶ್ವರ್‌ಗೆ ಹೆಚ್‌.ಡಿ.ಕುಮಾರಸ್ವಾಮಿ ಪರ ವಕೀಲರು ನೋಟಿಸ್ ನೀಡಿದ್ದಾರೆ. ಒಂದು ವಾರದಲ್ಲಿ ಆರೋಪಕ್ಕೆ ತಕ್ಕ ದಾಖಲೆ ಒದಗಿಸಬೇಕು.

ಇಲ್ಲದಿದ್ದರೆ ಬಹಿರಂಗ ಕ್ಷಮೆಯಾಚಿಸಬೇಕೆಂದು ನೋಟಿಸ್‌ನಲ್ಲಿ ಉಲ್ಲೇಖಿಸಲಾಗಿದೆ. ಕಳೆದ ವಾರ ಚನ್ನಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಸಿ.ಪಿ.ಯೋಗೇಶ್ವರ್, ಕುಮಾರಸ್ವಾಮಿ ಅವರಿಗೆ ಚನ್ನಪಟ್ಟಣ, ಸಿಂಗಪೂರ್​, ಮಲೇಷ್ಯಾದಲ್ಲಿ ಬೇನಾಮಿ ಆಸ್ತಿಗಳಿವೆ ಎಂದು ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಕುಮಾರಸ್ವಾಮಿ ಯೋಗೇಶ್ವರ್​ಗೆ ನೋಟಿಸ್​ ನೀಡಿದ್ದಾರೆ.

Leave a Reply

Your email address will not be published. Required fields are marked *