ನನ್ನ ಸೋಲಿಗೆ ಭೋಸ್​ರಾಜ್ ಕಾರಣ: ಸೈಯ್ಯದ್​​ ಯಾಸೀನ್​ ಆರೋಪ

ರಾಯಚೂರು: ನನ್ನ ಸೋಲಿಗೆ ಹಾಲಿ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಭೋಸರಾಜ್ ನೇರ ಕಾರಣವೆಂದು ರಾಯಚೂರು ನಗರ ಕ್ಷೇತ್ರದ ಕಾಂಗ್ರೆಸ್​ ಪರಾಜಿತ ಅಭ್ಯರ್ಥಿ ಸೈಯದ್ ಯಾಸೀನ್ ಗಂಭೀರ ಆರೋಪ ಮಾಡಿದ್ದಾರೆ.

ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಯಚೂರು ನಗರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದೆ. ಕಳೆದ ನಾಲ್ಕು ಚುನಾವಣೆಗಳಲ್ಲಿ ಭೋಸರಾಜ್ ನನ್ನ ಪರ ಕೆಲಸ ಮಾಡುವುದನ್ನು ಬಿಟ್ಟು, ವಿರುದ್ಧವಾಗಿ ಕೆಲಸ ಮಾಡಿದ್ದಾರೆ. ಸ್ವಪಕ್ಷದ ಮುಖಂಡರೇ ನನ್ನ ಸೋಲಿಗೆ ಕಾರಣವೆಂದು ಅವರು ದೂರಿದರು. ಇಂಥವರಿಗೆ ಪಕ್ಷ ಯಾವುದೇ ಉನ್ನತ ಹುದ್ದೆ ಕೊಡಬಾರದು ಎಂದು ಒತ್ತಾಯಿಸಿದರು. ಅಲ್ಲದೇ ಭೋಸರಾಜ್​​ ರಾಯಚೂರು ನಗರ, ಸಿಂಧನೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡುವುದಕ್ಕಿಂತ ಹೆಚ್ಚಾಗಿ, ಅವರನ್ನು ಸೋಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಈ ಬಗ್ಗೆ ಪಕ್ಷದ ಹೈಕಮಾಂಡ್‌ಗೆ ದೂರು ಸಲ್ಲಿಸಿದ್ದು, ಪಕ್ಷದ ಮುಖಂಡರು ಕ್ರಮ ಕೈಗೊಳ್ಳುವ ಭರವಸೆಯಿದೆ ಎಂದು‌ ವಿಶ್ವಾಸ ವ್ಯಕ್ತಪಡಿಸಿದರು.
 
ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv