ಇಂದಿನಿಂದ ಕಚೇರಿ ಕೆಲಸದ ಸಮಯ ಯಥಾಸ್ಥಿತಿ..

ಕಲಬುರ್ಗಿ: ಬೇಸಿಗೆ ಹಿನ್ನೆಲೆಯಲ್ಲಿ ಬದಲಾಗಿದ್ದ ಹೈದ್ರಾಬಾದ್​ ಕರ್ನಾಟಕ ಹಾಗೂ ಮುಂಬೈ ಕರ್ನಾಟಕ ಜಿಲ್ಲೆಗಳ ಕಚೇರಿ ಸಮಯ ಇಂದಿನಿಂದ ಯಥಾಸ್ಥಿತಿಗೆ ಬಂದಿದೆ. ಬೇಸಿಗೆ ಅಂತ್ಯಗೊಂಡಿದ್ದರಿಂದ ಇಂದಿನಿಂದ ಕಚೇರಿಗಳು ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ಕಾರ್ಯನಿರ್ವಹಿಸಲಿವೆ. ಹೈದ್ರಾಬಾದ್ ಕರ್ನಾಟಕ ಭಾಗದ 6 ಜಿಲ್ಲೆ ಹಾಗೂ ಮುಂಬೈ ಕರ್ನಾಟಕದ 2 ಜಿಲ್ಲೆಗಳಲ್ಲಿ ಇಂದಿನಿಂದ ಕಚೇರಿ ಸಮಯ ಯಥಾಸ್ಥಿತಿ ಕಾಯ್ದುಕೊಳ್ಳಲಿದೆ. ಬೇಸಿಗೆ ಹಿನ್ನೆಲೆಯಲ್ಲಿ ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಬೆಳಗ್ಗೆ 8 ರಿಂದ ಮಧ್ಯಾಹ್ನ 1.30 ರವರೆಗೆ ಕಚೇರಿ ಸಮಯವನ್ನು ಬದಲಾವಣೆ ಮಾಡಲಾಗಿತ್ತು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv