ಅಕ್ರಮ ಮರಳು ಅಡ್ಡೆ ಮೇಲೆ ಅಟ್ಯಾಕ್​ ₹25 ಲಕ್ಷ ಮೌಲ್ಯದ ಮರಳು ಸೀಜ್​​..!

ರಾಯಚೂರು: ಮಾನವಿ ತಾಲೂಕಿನ ಜೂಕೂರು ಗ್ರಾಮದಲ್ಲಿ ಅಕ್ರಮ ಮರಳು ಅಡ್ಡೆ ಮೇಲೆ ಅಧಿಕಾರಿಗಳ ತಂಡ ದಾಳಿ ನಡೆಸಿ, ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ₹25 ಲಕ್ಷ ಮೌಲ್ಯದ 5,500 ಮೆಟ್ರಿಕ್ ಟನ್ ಮರಳನ್ನು ಜಪ್ತಿ ಮಾಡಿದೆ.
ಗ್ರಾಮಸ್ಥರ ಮಾಹಿತಿ ಮೇರೆಗೆ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಜೈರಾಮ, ತಹಶೀಲ್ದಾರ್ ಅಮರೇಶ್, ಪೊಲೀಸ್ ಸಹಾಯದೊಂದಿಗೆ ಮರಳು ಸಂಗ್ರಹಿಸಿಟ್ಟಿದ್ದ ನದಿ ತಟದ ಅಡ್ಡೆಯ ಮೇಲೆ ದಾಳಿ ನಡೆಸಿ, ಮರಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv