ಜ. 9ರ ಮಧ್ಯರಾತ್ರಿ 12 ಗಂಟೆಯಿಂದ ಬಳ್ಳಾರಿ ಜಿಲ್ಲೆಗೆ ಹರಪನಹಳ್ಳಿ ತಾಲೂಕು ಸೇರ್ಪಡೆ

ದಾವಣಗೆರೆ: ಬಹುವರ್ಷಗಳ ಕಾಲ ನನೆಗುದಿಗೆ ಬಿದ್ದಿದ್ದ ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲೂಕು ಕೊನೆಗೂ ಬಳ್ಳಾರಿ ಜಿಲ್ಲೆಗೆ ಅಧಿಕೃತವಾಗಿ ಸೇರ್ಪಡೆಯಾಗಿದೆ.
ಇಂದು ಮಧ್ಯರಾತ್ರಿ 12 ಗಂಟೆಯಿಂದ ಹರಪನಹಳ್ಳಿ ತಾಲೂಕು ಅಧಿಕೃತವಾಗಿ ಬಳ್ಳಾರಿ ಜಿಲ್ಲೆಗೆ ಸೇರ್ಪಡೆಯಾಗಲಿದೆ. ಇವತ್ತು ದಾವಣಗೆರೆ ಜಿಲ್ಲಾಧಿಕಾರಿಗಳಿಗೆ ಸರ್ಕಾರದ ಗೆಜೆಟ್ ನೋಟಿಫಿಕೇಷನ್ ತಲುಪಿದೆ. ಅಧಿಕೃತ ಆದೇಶದಂತೆ ಜನವರಿ 10ರಿಂದ ಹರಪನಹಳ್ಳಿ ತಾಲೂಕು ಬಳ್ಳಾರಿ ಜಿಲ್ಲೆಯ ಭಾಗವಾಗಲಿದೆ.

1997 ರಿಂದ ದಾವಣಗೆರೆ ಜಿಲ್ಲೆಯ ಭಾಗವಾಗಿದ್ದ ಹರಪನಹಳ್ಳಿ ತಾಲೂಕು ಬಳ್ಳಾರಿ ಜಿಲ್ಲೆಗೆ ಸೇರ್ಪಡೆಯಾಗಬೇಕೆಂದು ಹೋರಾಟ ಕೂಡ ನಡೆಯುತ್ತಿತ್ತು. ಇತ್ತೀಚೆಗಷ್ಟೇ ಬಳ್ಳಾರಿ ಜಿಲ್ಲೆಗೆ ಸೇರ್ಪಡೆ ಮಾಡಿ ಆದೇಶ ಮಾಡಿದ್ದ ರಾಜ್ಯ ಸರ್ಕಾರ ಕೊನೆಗೂ ತಾಲೂಕು ಆಡಳಿತದ ಅಧಿಕೃತ ದಾಖಲೆ ಸಂಪೂರ್ಣ ಬಳ್ಳಾರಿಗೆ ಹಸ್ತಾಂತರ ಮಾಡಲಾಗಿದೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಮಾಹಿತಿ ನೀಡಿದ್ದಾರೆ. ಇದರಿಂದ ಹರಪನಹಳ್ಳಿ ತಾಲೂಕಿನ ಜನರಿಗೆ ಸಹಜವಾಗಿ ಸಂತಸವಾಗಿದೆ.