ಬಿಬಿಎಂಪಿಯಿಂದ ಜು.18 ಕ್ಕೆ ಕೆಂಪೇಗೌಡ ಜಯಂತಿ

ಬೆಂಗಳೂರು : ಇದೇ ಜುಲೈ 18 ರಂದು ಬಿಬಿಎಂಪಿ ವತಿಯಿಂದ ಕೆಂಪೇಗೌಡ ದಿನಾಚರಣೆ ಬಿಬಿಎಂಪಿ ಕೇಂದ್ರ ಕಚೇರಿಯ ಡಾ. ರಾಜಕುಮಾರ್ ಗಾಜಿನ ಮನೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಸಂಜೆ 4 ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸಂಜೆ 6 ಗಂಟೆಗೆ ನೌಕರರಿಗೆ ಕೆಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ವಿವಿಧ ಕ್ಷೇತ್ರಗಳಿಂದ 200ಕ್ಕೂ ಹೆಚ್ಚು ಅರ್ಜಿ ಸಲ್ಲಿಕೆಯಾದರಿಂದ ಈ ಬಾರಿ 159 ಜನರಿಗೆ ಕೆಂಪೇಗೌಡ ಪ್ರಶಸ್ತಿ ನೀಡಲು ಪಾಲಿಕೆ ಮುಂದಾಗಿದೆ. ನಾಡಪ್ರಭು ಕೆಂಪೇಗೌಡ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಭಾಗವಹಿಸಲಿದ್ದಾರೆ.