ಆಪರೇಷನ್​ ಕಾಡಾನೆಗೆ ಅರಣ್ಯ ಇಲಾಖೆ ಸಜ್ಜು

ಕೊಡಗು:  ಜಿಲ್ಲೆಯಲ್ಲಿ ದಿನೇ ದಿನೇ ಕಾಡಾನೆ ಹಾವಳಿ ಹೆಚ್ಚುತ್ತಿದೆ. ಇದ್ರಿಂದ ಬೇಸೆತ್ತ ಕೊಡಗು ರೈತರು, ಕಾರ್ಮಿಕರ ಅರಣ್ಯ ಹೋರಾಟ ಸಮಿತಿ ಕಾಡಾನೆಗಳನ್ನು ಸೆರೆ ಹಿಡಿಯುವಂತೆ, ಅರಣ್ಯ ಇಲಾಖೆಗೆ ಒತ್ತಾಯಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಅರಣ್ಯ ಇಲಾಖೆಗೆ 2 ಕಾಡಾನೆಗಳನ್ನು ಸೆರೆ ಹಿಡಿಯಲು ರಾಜ್ಯ ವನ್ಯಜೀವಿ ವಿಭಾಗದಿಂದ ಅನುಮತಿ ದೊರೆತಿದೆ. ಇದರನ್ವಯ ಜಿಲ್ಲೆಯ ಸಿದ್ದಾಪುರ ವ್ಯಾಪ್ತಿಯಲ್ಲಿ ಕಾಡಾನೆ ಸೆರೆಗೆ ಅರಣ್ಯ ಇಲಾಖೆ ತಯಾರಿ ನಡೆಸಿದೆ. ಈ ಭಾಗದಲ್ಲಿ ಹೆಚ್ಚು ಪುಂಡಾಟ ನಡೆಸುತ್ತ್ತಿರುವ ಒಂದು ಗಂಡಾನೆ ಹಾಗೂ ಒಂದು ಹೆಣ್ಣಾನೆ ಹಿಡಿಯಲು ಸಜ್ಜಾಗಿದ್ದಾರೆ. ಕನಿಷ್ಠ 15 ಕಾಡಾನೆ ಸೆರೆಗೆ ಸಮಿತಿ ಅರಣ್ಯ ಇಲಾಖೆಗೆ ಮನವಿ ಸಲ್ಲಿಸಲಾಗಿತ್ತು. ಆದರೆ ಸದ್ಯಕ್ಕೆ 2 ಕಾಡಾನೆಗಳನ್ನು ಹಿಡಿಯಲು ಮಾತ್ರ ಅರಣ್ಯ ಇಲಾಖೆ ಮುಂದಾಗಿದೆ. ಈ ಬಗ್ಗೆ ರಾಜ್ಯ ವನ್ಯಜೀವಿ ಸಿಸಿಎಫ್ ಮನೋಜ್ ಕುಮಾರ್ ಅಧಿಕೃತ ಮಾಹಿತಿ ನೀಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv