ಹಿಮಪಾತದಲ್ಲಿ ಸಿಲುಕಿದ್ದ 700 ಜನರ ಏರ್​ಲಿಫ್ಟ್

ಶ್ರೀನಗರ: ಜಮ್ಮು ಕಾಶ್ಮೀರದ ಶ್ರೀನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಲುಕಿದ್ದ ಸುಮಾರು 700 ಜನರನ್ನ ಭಾರತೀಯ ವಾಯುಸೇನೆ ರಕ್ಷಿಸಿದೆ. ಇತರ ಭಾಗಗಳಿಗೆ ಸಂಪರ್ಕ ಕೊಂಡಿಯಾಗಿದ್ದ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಿಮಪಾತವಾಗುತ್ತಿರುವುದರಿಂದ ರಸ್ತೆ ಮಾರ್ಗ ಸಂಪೂರ್ಣವಾಗಿ ಬಂದ್ ಆಗಿದೆ. ಅಲ್ಲಿ ವಿದ್ಯಾರ್ಥಿಗಳು, ಪ್ರಯಾಣಿಕರು ಸೇರಿದಂತೆ ಸಾವಿರಾರು ಮಂದಿ ಪ್ರಯಾಣಿಸಲು ಸಾಧ್ಯವಾಗದೇ ಸಿಲುಕಿಕೊಂಡಿದ್ರು. ಇದೇ ಮೊದಲ ಬಾರಿಗೆ ಸಿ-17 ಏರ್ ಕ್ರಾಫ್ಟ್ ಬಳಕೆ ಮಾಡಿ ಕಾರ್ಯಾಚರಣೆ ನಡೆಸಿದ್ದು, 707 ಪ್ರಯಾಣಿಕರನ್ನು ಏರ್ ಲಿಫ್ಟ್ ಮಾಡಲಾಗಿದೆ.
ಕಳೆದ ಕೆಲ ದಿನಗಳಿಂದ ಒಟ್ಟು 1,432 ಜನರನ್ನ ಏರ್ ಲಿಫ್ಟ್ ಮಾಡಲಾಗಿದೆ ಎಂದು ರಕ್ಷಣಾ ವಕ್ತಾರರು ಹೇಳಿದ್ದಾರೆ. ಜಿಲ್ಲಾಡಳಿತ ಹಾಗೂ ಭಾರತೀಯ ವಾಯುಪಡೆ, ರಕ್ಷಣಾ ಕಾರ್ಯಾಚರಣೆಯನ್ನು ಜಂಟಿಯಾಗಿ ಕೈಗೊಂಡಿದ್ದು, ಮೊದಲ ಹಂತದಲ್ಲಿ 301, ಎರಡನೇ ಹಂತದಲ್ಲಿ ವಿದ್ಯಾರ್ಥಿಗಳೂ ಸೇರಿದಂತೆ 406 ಜನರನ್ನ ಏರ್ ಲಿಫ್ಟ್ ಮಾಡಲಾಗಿದೆ. ಜಮ್ಮು ಮೂಲದ ಟೈಗರ್ ವಿಭಾಗದಿಂದ ಜನರಿಗೆ ಆಹಾರ ಸಾಮಗ್ರಿಗಳನ್ನು ಪೂರೈಕೆ ಮಾಡಲಾಗುತ್ತಿದೆ.

Follow us on:

YouTube: firstNewsKannada  Instagram: firstnews.tv  Face Book: firstnews.tv  Twitter: firstnews.tv